ಓದುಗರ ಪತ್ರ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್‌ನಿಂದ ಅನ್ವಯವಾಗುವಂತೆ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ದೇಶದ ೧,೧೫೦ಕ್ಕೂ ಹೆಚ್ಚು ಟೋಲ್ ಪ್ಲಾಜಾಗಳಲ್ಲಿ ೨೦೦೮ರ ಹಳೆಯ ನಿಯಮಗಳ ಅಡಿಯಲ್ಲೇ ಇಂದಿಗೂ ಶುಲ್ಕ ವಸೂಲಿ ಮಾಡುತ್ತಿರುವುದು ಎಷ್ಟು ಸರಿ? ರಸ್ತೆಗಳನ್ನು ಸುಧಾರಿಸುವ ಬದಲು ಕೇವಲ ಶುಲ್ಕಗಳನ್ನು ಮಾತ್ರ ಏರಿಸಲಾಗುತ್ತಿದೆ. ಎರಡು ದಶಕಗಳ ಹಿಂದಿನ ಹಳತಾದ ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಗಳನ್ನು ಇಂದಿನ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಮರುಪರಿಶೀಲಿಸುವ ಅಗತ್ಯವಿದೆ. ಅಭಿವೃದ್ಧಿಯ ಹೆಸರಲ್ಲಿ ಬಳಕೆದಾರರ ಜೇಬಿಗೆ ಕತ್ತರಿ ಹಾಕುವ ಈ ನಿರಂತರ ದರ ಏರಿಕೆ ತಕ್ಷಣ ನಿಲ್ಲಲಿ. ಸರ್ಕಾರವು ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಟೋಲ್ ನೀತಿಯನ್ನು ಪಾರದರ್ಶಕಗೊಳಿಸಲಿ.
– ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು
ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ…
ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್ ತಂದರು. ಹಳ್ಳಿಗಳಲ್ಲೂ ಗ್ಯಾಸ್ ಬಂತು. ಈಗ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…
ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್ ಕೊಡಿಸಿ ಎಂದು ಎಲ್ಲಾ ಪಕ್ಷಗಳ ಕೆಲವು ಶಾಸಕರು…
ಎಸ್‌ಎಸ್‌ಎಲ್‌ಸಿ ಹಿಂದಿ ಭಾಷೆಯ ಪರೀಕ್ಷೆ ಮಾ.೩೧ರಂದು ನಡೆಯಲಿದ್ದು, ಪರೀಕ್ಷೆ ಸಂದರ್ಭದಲ್ಲಿಯೇ ಸರ್ಕಾರ ಹಿಂದಿ ವಿಷಯದಲ್ಲಿ ಅಂಕಗಳನ್ನು ಪರಿಗಣಿಸುವುದಿಲ್ಲ, ಬದಲಾಗಿ ಗ್ರೇಡ್…
ಜನರಿಂದ ಚುನಾಯಿತರಾದ ಜನಪ್ರತಿನಿಧಿಗೆ ತನ್ನ ಕ್ಷೇತ್ರಕ್ಕೆ ಮಾಡಬೇಕಾಗಿರುವ ಯೋಜನೆಗಳ ಬಗ್ಗೆ ಸಾಕಷ್ಟು ಒಲವಿರಬೇಕು ಹಾಗೂ ಬದ್ಧತೆ ಇರಬೇಕು ಎನ್ನುವುದಕ್ಕೆ ತಮಗೆ…