Andolana originals

ಓದುಗರ ಪತ್ರ: ಟೋಲ್ ದರ ಹೆಚ್ಚಳ ಗಾಯದ ಮೇಲೆ ಬರೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್‌ನಿಂದ ಅನ್ವಯವಾಗುವಂತೆ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ದೇಶದ ೧,೧೫೦ಕ್ಕೂ ಹೆಚ್ಚು ಟೋಲ್ ಪ್ಲಾಜಾಗಳಲ್ಲಿ ೨೦೦೮ರ ಹಳೆಯ ನಿಯಮಗಳ ಅಡಿಯಲ್ಲೇ ಇಂದಿಗೂ ಶುಲ್ಕ ವಸೂಲಿ ಮಾಡುತ್ತಿರುವುದು ಎಷ್ಟು ಸರಿ? ರಸ್ತೆಗಳನ್ನು ಸುಧಾರಿಸುವ ಬದಲು ಕೇವಲ ಶುಲ್ಕಗಳನ್ನು ಮಾತ್ರ ಏರಿಸಲಾಗುತ್ತಿದೆ. ಎರಡು ದಶಕಗಳ ಹಿಂದಿನ ಹಳತಾದ ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಗಳನ್ನು ಇಂದಿನ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಮರುಪರಿಶೀಲಿಸುವ ಅಗತ್ಯವಿದೆ. ಅಭಿವೃದ್ಧಿಯ ಹೆಸರಲ್ಲಿ ಬಳಕೆದಾರರ ಜೇಬಿಗೆ ಕತ್ತರಿ ಹಾಕುವ ಈ ನಿರಂತರ ದರ ಏರಿಕೆ ತಕ್ಷಣ ನಿಲ್ಲಲಿ. ಸರ್ಕಾರವು ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಟೋಲ್ ನೀತಿಯನ್ನು ಪಾರದರ್ಶಕಗೊಳಿಸಲಿ.

– ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

12 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

13 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

14 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

14 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

14 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

17 hours ago