ಓದುಗರ ಪತ್ರ
ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಪಾರಂಪರಿಕ ಕ್ರೀಡೆ ಕುಸ್ತಿ ಪಂದ್ಯಾವಳಿ ಪ್ರೋತ್ಸಾಹವಿಲ್ಲದೆ ವರ್ಷದಿಂದ ವರ್ಷಕ್ಕೆ ಕಳೆಗುಂದುತ್ತಿದೆ. ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ ಎಂಬ ಗಾದೆ ಮಾತಿನಂತೆ ಕೆಲವರು ದಸರಾ ಕುಸ್ತಿಯಲ್ಲಿ ಭಾಗವಹಿಸುವ ಪೈಲ್ವಾನರಿಗೆ ಪ್ರೋತ್ಸಾಹ ಧನ ನೀಡುವಲ್ಲಿ ತಾರತಮ್ಯ ಮಾಡಿ, ಆನ್ ಲೈನ್ ಪೇಮೆಂಟ್ ಮಾಡುತ್ತೇವೆ ಎಂದು ಹೇಳಿ ಎಷ್ಟೋ ಪೈಲ್ವಾನರಿಗೆ ಪ್ರೋತ್ಸಾಹಧನ ನೀಡದೇ ವಂಚಿಸುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ.
ದೊಡ್ಡಕೆರೆ ಮೈದಾನದ ಡಿ.ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣಕ್ಕೆ ಚಾವಣಿ ಇಲ್ಲದೆ ಬಿಸಿಲಿನ ತಾಪ ತಾಳಲಾರದೆ ಹಾಗೂ ಮಳೆ ಬಂದಾಗ ಪ್ರೇಕ್ಷಕರು ಪಡುವ ಕಷ್ಟ ಅಷ್ಟಿಷ್ಟಲ್ಲ. ದಶಕಗಳ ಹಿಂದೆ ಕುಸ್ತಿ ಪಂದ್ಯಾವಳಿಗಳಿಗೆ ವ್ಯಾಪಕ ಪ್ರಚಾರ ಮಾಡಲಾಗುತ್ತಿತ್ತು.
ಆದರೆ ಇತ್ತೀಚಿನ ದಿನಗಳಲ್ಲಿ ಪ್ರಚಾರವಿಲ್ಲದೆ ನೋಡುಗರ ಸಂಖ್ಯೆ ಕ್ಷೀಣಿಸುತ್ತಿದೆ. ಈ ವರ್ಷದ ದಸರಾ ಮಹೋತ್ಸವ ಪ್ರಾರಂಭವಾಗಲು ಸಮಯವಿರುವುದರಿಂದ ಪ್ರೋತ್ಸಾಹ ಧನ ಹೆಚ್ಚಿಸಿ, ವ್ಯಾಪಕ ಪ್ರಚಾರ ನಡೆಸಿ, ಪಾರದರ್ಶಕತೆಗೆ ಆದ್ಯತೆ ನೀಡಿ ಪಾರಂಪರಿಕ ಕ್ರೀಡೆಯನ್ನು ಉಳಿಸುವುದು ಅಗತ್ಯ.
– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…
ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…
ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…
ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…