ಓದುಗರ ಪತ್ರ
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು, ನೀರು ಹಾಗೂ ಲೇಸ್, ಕುರ್‌ಕುರೆ ಮೊದಲಾದ ತಿಂಡಿಯ ಪೊಟ್ಟಣಗಳನ್ನು ಮಾರಾಟ ಮಾಡುತ್ತಾರೆ. ಆದರೆ ಅವರು ಹಾಕಿಕೊಂಡಿರುವ ಬಟ್ಟೆಗಳು ಕೊಳಕಾಗಿರುತ್ತವೆ ಹಾಗೂ ಎಷ್ಟೋ ಮಾರಾಟಗಾರರು ಮುಖ ಕ್ಷೌರ ಮಾಡದೇ, ತಲೆ ಕೂದಲು ಕತ್ತರಿಸಿರುವುದಿಲ್ಲ. ಪ್ರಯಾಣಿಕರಿಗೆ ಇದು ಮುಜುಗರ ತರಿಸುತ್ತದೆ.
ರೈಲಿನಲ್ಲಿ ಊಟ, ತಿಂಡಿ ಹಾಗೂ ಪಾನೀಯಗಳನ್ನು ಮಾರಾಟ ಮಾಡುವವರು ಶುಭ್ರವಾದ ಬಟ್ಟೆ ಧರಿಸಬೇಕು ಹಾಗೂ ನಿಯಮಿತವಾಗಿ ಕಟಿಂಗ್, ಶೇವಿಂಗ್ ಮಾಡಿಕೊಂಡಿರಬೇಕು ಎಂಬ ನಿಯಮವನ್ನು ರೈಲ್ವೆ ಇಲಾಖೆ ಅಧಿಕಾರಿಗಳು ರೂಪಿಸಬೇಕು. ಇದರಿಂದ ಮಾರಾಟ ಮಾಡುವವರೂ ಶಿಸ್ತು ಪಾಲಿಸಿದಂತಾಗುತ್ತದೆ. ಪ್ರಯಾಣಿಕರಿಗೂ ಅವರಿಂದ ಮುಜುಗರವಾಗುವುದಿಲ್ಲ.
-ಅನಿರುದ್ಧ , ಮೈಸೂರು
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…