ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ ಏಳು ಕ್ರೀಡಾ ವಸತಿ ನಿಲಯಗಳಲ್ಲಿ ಕುಸ್ತಿ ಕ್ರೀಡಾ ವಿಭಾಗಗಳನ್ನು ಆರಂಭಿಸಲಾಗುತ್ತದೆ ಎಂದು ಕ್ರೀಡಾ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಮಂಡಲ ಅಧಿವೇಶನದಲ್ಲಿ ಹೇಳಿರುವುದು ಸ್ವಾಗ ತಾರ್ಹವಾಗಿದೆ.
ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡರು ದೇಸಿ ಕ್ರೀಡೆ ಕುಸ್ತಿಗೆ ಸರ್ಕಾರದ ಬೆಂಬಲ, ಕುಸ್ತಿ ತರಬೇತಿ ಕೇಂದ್ರಗಳು ಹಾಗೂ ತರಬೇತಿದಾರರ ನೇಮಕ ಮಾಡುವುದರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಿದ್ದರಾಮಯ್ಯನವರು, ಪ್ರತಿವರ್ಷ ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಕ್ರೀಡೆಯನ್ನು ಪ್ರೋತ್ಸಾಹಿಸಲು ಸರ್ಕಾರ ಮುಂದಾಗಿದೆ ಎಂದು ಹೇಳಿರುವುದು ಶ್ಲಾಘನೀಯ.
– ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು





