Andolana originals

ಓದುಗರ ಪತ್ರ: ಸಿಗ್ನಲ್‌ನಲ್ಲಿ ವಾಹನಗಳ ಎಂಜಿನ್ ಆಫ್ ಮಾಡಿ

ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ ವಾಹನದ ಎಂಜಿನ್ ಸ್ವಿಚ್ ಆಫ್ ಮಾಡಿ ಗ್ರೀನ್ ಸಿಗ್ನಲ್ ಬರುವ ೫ ಅಥವಾ ೧೦ ಸೆಕೆಂಡಿನಲ್ಲಿ ಮತ್ತೆ ಚಾಲನೆ ಮಾಡುವುದು ಅಗತ್ಯ.

ಇದರಿಂದ ಇಂಧನ ಉಳಿತಾಯವಾಗುತ್ತದೆ. ಎಂಜಿನ್ ಹೊಗೆ ಕಡಿಮೆ ಆಗಿ ಸುತ್ತಲಿನ ಪರಿಸರ ಎಂಜಿನ್ ಹೊಗೆಯಮಾಲಿನ್ಯದಿಂದ ಮುಕ್ತವಾಗುತ್ತದೆ. ಸಿಗ್ನಲ್ ಬಳಿ ಕಾಯುವಾಗ ಸವಾರರು ವಾಹನಗಳ ಹೊಗೆಯ ಸೇವನೆ ಮಾಡುವುದು ತಪ್ಪುತ್ತದೆ. ಶಬ್ದ ಮಾಲಿನ್ಯವೂ ಕಡಿಮೆ ಆಗುತ್ತದೆ.

ಈ ನಿಯಮವನ್ನು ಎಲ್ಲಾ ನಗರ ಪ್ರದೇಶಗಳಲ್ಲಿ ಅನುಸರಿಸಿದಲ್ಲಿ ಆಗುವ ಇಂಧನ ಉಳಿತಾಯ ಅಗಾಧ. ವಾಹನದಲ್ಲಿ ಪಯಣಿಸುವವರಿಗೆ ವಾಯು ಮಾಲಿನ್ಯದಿಂದ ರಕ್ಷಣೆಯೂ ದೊರೆಯುತ್ತದೆ. ಈ ನಿಟ್ಟಿನಲ್ಲಿ ತಜ್ಞರು ಗಮನ ಹರಿಸಬೇಕು.

 -ಲಕ್ಷ್ಮಣ್ ಗೊರ್ಲಕಟ್ಟೆ, ಗದ್ದಿಗೆ ರಸ್ತೆ, ಮೈಸೂರು

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

58 mins ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

2 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

2 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

2 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

3 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

7 hours ago