ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ ನಿರ್ಮಾಣವಾಗಿರುವ ಸಾರ್ವ ಜನಿಕ ಶೌಚಾಲಯಗಳಿಗೆ ಬೀಗ ಹಾಕಲಾಗಿದ್ದು, ಜನರಿಗೆ ಉಪಯೋಗಕ್ಕೆ ಬಾರದಂತಾಗಿವೆ.
ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಶೌಚಾಲಯಗಳ ಬೀಗ ತೆರೆಯುವುದರೊಂದಿಗೆ ಶೌಚಾಲಯಗಳ ನಿರ್ವಹಣೆಗೆ ಅಗತ್ಯ ಸಿಬ್ಬಂದಿಯನ್ನು ನೇಮಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ .
-ನಾಗೇಶ್, ಮಾನಸಗಂಗೋತ್ರಿ, ಮೈಸೂರು





