ಮೈಸೂರಿನ ಮೆಟ್ರೋಪೋಲ್ ವೃತ್ತದ ಸಮೀಪ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯಗಳಿಗೆ ಬೀಗ ಹಾಕಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ‘ಆಂದೋಲನ’ ದಿನಪತ್ರಿಕೆಯ ಓದುಗರ ಪತ್ರ ವಿಭಾಗದಲ್ಲಿ ೨೦೨೫ರ ಡಿಸೆಂಬರ್ ೧೦ರಂದು ಪತ್ರ ಪ್ರಕಟವಾಗಿತ್ತು. ಇದಕ್ಕೆ ಸ್ಪಂದಿಸಿರುವ ಮೈಸೂರು ಪಾಲಿಕೆ ಅಧಿಕಾರಿಗಳು ಸಾರ್ವಜನಿಕ ಶೌಚಾಲಯಗಳ ಬೀಗವನ್ನು ತೆರವುಗೊಳಿಸಿದ್ದು, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿದ್ದಾರೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು





