ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ ರಸ್ತೆಯು ಹೊಮ್ಮರಗಳ್ಳಿ ಹಾಗೂ ಹೆಗ್ಗಡದೇವನ ಕೋಟೆ ಸಂಪರ್ಕ ರಸ್ತೆಯಾಗಿದೆ. ಈ ರಸ್ತೆಯಲ್ಲಿ ಒಂದು ವಾಹನ ಬಂದರೆ ಸಾಕು, ಅದರಿಂದ ವಿಪರೀತ ದೂಳು ಆವರಿಸಿಕೊಳ್ಳುತ್ತದೆ. ಈ ದೂಳಿನಿಂದ ಪರಿಸರ ಕಲುಷಿತವಾಗಿರುವುದಲ್ಲದೆ, ಸಾರ್ವಜನಿಕರಿಗೆ ಆರೋಗ್ಯ ಸಮಸ್ಯೆ ಉಂಟು ಮಾಡುತ್ತಿದೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿರುವುದರಿಂದ ದ್ವಿಚಕ್ರವಾಹನ ಸವಾರರು ಹಲವು ಬಾರಿ ಬಿದ್ದು ಕೈ, ಕಾಲು ಮುರಿದುಕೊಂಡಿರುವ ಉದಾಹರಣೆಗಳಿವೆ. ಜೊತೆಗೆ ಆಗಾಗ ಸಣ್ಣಪುಟ್ಟ ಅಪಘಾತಗಳೂ ಜರುಗುತ್ತಿವೆ. ಮಳೆಗಾಲದಲ್ಲಂತೂ ಪಾದಚಾರಿಗಳು ಹಾಗೂ ಸವಾರರಿಗೆ ಈ ರಸ್ತೆಯಲ್ಲಿ ಓಡಾಡುವುದು ಒಂದು ರೀತಿಯ ಸವಾಲಿನ ಕೆಲಸವಾಗಿದೆ. ಆದ್ದರಿಂದ ಈ ವ್ಯಾಪ್ತಿಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಈ ರಸ್ತೆಯನ್ನು ಡಾಂಬರೀಕರಣ ಮಾಡಿಸಿ, ಜನರು ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
-ಬಿ.ಎಸ್.ಸಾಯಿ ಸಂದೇಶ್, ಮೈಸೂರು
ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…
ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…
ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…
ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್ ರೂಂ ಬುಕ್ಕಿಂಗ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ ಎಂದು ಹೋಟೆಲ್ ಮಾಲೀಕರ ಸಂಘದ…
ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ…
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ…