Andolana originals

ಓದುಗರ ಪತ್ರ| ಸರಗೂರು ಬಸ್ ನಿಲ್ದಾಣದಲ್ಲಿ ಅನೈರ್ಮಲ್ಯ

ಸರಗೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ಪ್ರಯಾಣಿಕರಿಗೆ ಕಿರಿಕಿರಿಯಾಗುತ್ತಿದೆ. ಈ ನಿಲ್ದಾಣದ ಪಕ್ಕದಲ್ಲಿಯೇ ಕೊಳಚೆ ನೀರು, ಕಸದ ರಾಶಿಯೇ ಸಂಗ್ರಹವಾಗಿದ್ದು, ದುರ್ವಾಸನೆ ಬೀರುತ್ತಿದೆ. ಅಲ್ಲದೆ ಅಕ್ಕಪಕ್ಕದ ಅಂಗಡಿ ಮುಂಗಟ್ಟಿನವರೂ ಕಸವನ್ನು ಇಲ್ಲಿಯೇ ತಂದು ಬೀಸಾಡುತ್ತಿದ್ದಾರೆ. ಈಗ ಮಳೆಗಾಲವಾದ್ದರಿಂದ ಆ ಕೊಳಚೆ ನೀರು ಮಳೆ ನೀರಿನೊಂದಿಗೆ ನಿಲ್ದಾಣದ ಮುಂಭಾಗದಲ್ಲಿಯೇ ಹರಿಯುತ್ತಿದ್ದು, ಪ್ರಯಾಣಿಕರು ಬಸ್ ನಿಲ್ದಾಣಕ್ಕೆ ಬರಲು ಹರಸಾಹಸಪಡುವಂತಾಗಿದೆ.

ಈ ನಿಲ್ದಾಣಕ್ಕೆ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಬಂದು ಹೋಗುತ್ತಾರೆ. ಇಂತಹ ಜನನಿಬಿಡ ಪ್ರದೇಶದಲ್ಲಿನ ಅನೈರ್ಮಲ್ಯದ ವಾತಾವರಣದಿಂದಾಗಿ ಅವರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದ್ದು, ದುರ್ವಾಸನೆ ತಾಳಲಾರದೆ ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.

ಬಸ್ ನಿಲ್ದಾಣವು ಸರಗೂರು ಪಟ್ಟಣದ ಕೇಂದ್ರ ಭಾಗದಲ್ಲಿಯೇ ಇದ್ದು, ಇದರ ಮುಂಭಾಗದಲ್ಲೇ ಪಟ್ಟಣ ಪಂಚಾಯಿತಿ ಇದ್ದರೂ ಇಲ್ಲಿ ಸ್ವಚ್ಛತೆ ಕಾಪಾಡುವ ಬಗ್ಗೆ ಯಾರೂ ಗಮನಹರಿಸುತ್ತಿಲ್ಲ. ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಸ್ವಚ್ಛತೆ ಕಾಪಾಡಲು ಕ್ರಮಕೈಗೊಳ್ಳಬೇಕಿದೆ.

-ಸಂಜಯ್, ಸರಗೂರು.

ಆಂದೋಲನ ಡೆಸ್ಕ್

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

3 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

3 hours ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

3 hours ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

12 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

13 hours ago