ಉತ್ತರ ಪ್ರದೇಶದ ಸಚಿವ ಸಂಜಯ ನಿಶಾದ ಅವರು ಪ್ರವಾಹ ಪೀಡಿತ ಪ್ರದೇಶ ಗಳಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ‘ಗಂಗೆ ನಿಮ್ಮ ಪಾದ ತೊಳೆಯಲು ಬಂದಿದ್ದಾಳೆ’ ಎಂದು ಹೇಳಿರುವುದಾಗಿ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವರದಿಯಾಗಿದೆ.
ಸಚಿವರ ಈ ಬೇಜವಾಬ್ದಾರಿ ಹೇಳಿಕೆಯು ಹಾಸ್ಯಾಸ್ಪದವಾಗಿದೆ. ಯಾವ ಸಂದರ್ಭದಲ್ಲಿ ಹೇಗೆಮಾತನಾಡಬೇಕೆಂಬ ಕನಿಷ್ಠ ಪರಿಜ್ಞಾನದ ಕೊರತೆ ಇರುವುದು ದುರಂತವೇ ಸರಿ. ಜನಪ್ರತಿನಿಧಿಗಳು ಇನ್ನು ಮುಂದಾದರೂ ಜವಾಬ್ದಾರಿಯಿಂದ ಮಾತನಾಡಬೇಕು ಹಾಗೂ ಜನರ ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಡಾ. ಎ.ಕೆ. ಜಯವೀರ, ಖೇಮಲಾಪುರ, ರಾಯಭಾಗ ತಾ





