Mysore
19
clear sky

Social Media

ಶುಕ್ರವಾರ, 02 ಜನವರಿ 2026
Light
Dark

ಓದುಗರ ಪತ್ರ: ಜನಪ್ರತಿನಿಧಿಗಳಿಂದಲೇ ಕಾನೂನು ಉಲ್ಲಂಘನೆ

ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್‌ಗಳನ್ನು ಅಳವಡಿಸಿ ಪರಿಸರವನ್ನು ಮಲಿನಗೊಳಿಸುತ್ತಿದ್ದಾರೆ.

ಇದು ಸ್ಪಷ್ಟವಾಗಿ ಕರ್ನಾಟಕದ ‘ಬಹಿರಂಗ ಸ್ಥಳಗಳ (ವಿರೂಪಗೊಳಿಸುವುದನ್ನು ಪ್ರತಿಬಂಧಿಸುವ) ಅಧಿನಿಯಮ, ೧೯೮೧’ ಯ ಕಾನೂನನ್ನು ಉಲ್ಲಂಘಿಸುತ್ತದೆ. ರಾಜಕಾರಣಿಗಳು ಕಾನೂನುಗಳನ್ನು ಪಾಲಿಸದೇ ತಮ್ಮ ಸ್ವಾರ್ಥಕ್ಕಾಗಿ ಈ ರೀತಿ ಪ್ರಚಾರ ಮಾಡುವುದನ್ನು ನಿಲ್ಲಿಸಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು.

-ಡಾ. ಎಚ್.ಕೆ.ವಿಜಯಕುಮಾರ, ಬೆಂಗಳೂರು

Tags:
error: Content is protected !!