ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ ಜಯಂತಿಯಂದೇ ಪ್ರತಿಮೆಯನ್ನು ಅನಾವರಣಗೊಳಿಸಿದ್ದರೆ ಅರ್ಥಪೂರ್ಣವಾಗುತ್ತಿತ್ತು. ಪ್ರತಿಮೆ ಸ್ಥಾಪನೆಗೆ ಕ್ರಮ ಕೈಗೊಂಡಿರುವ ಶಾಸಕ ಶ್ರೀವತ್ಸ ಅವರು ಆದಷ್ಟು ಬೇಗ ಪ್ರತಿಮೆ ಉದ್ಘಾಟನೆಗೂ ಕ್ರಮ ಕೈಗೊಳ್ಳಬೇಕಾಗಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ , ಮೈಸೂರು





