ಓದುಗರ ಪತ್ರ
ಡಿ.13, 14 ರಂದು ಮೈಸೂರಿನಲ್ಲಿ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವುದಾಗಿ ಪತ್ರಿಕೆಗಳಲ್ಲಿ ವರದಿಯಾಗಿತ್ತು.
ಮತದಾರರ ಪಟ್ಟಿಯ ಪರಿಶೀಲನೆಗಾಗಿ ಚಾಮುಂಡೇಶ್ವರಿ ಕ್ಷೇತ್ರ, ವಾರ್ಡ್ ನಂ. ೪೬ರ ಕನಕದಾಸನಗರ, ಜೆ.ಬ್ಲಾಕ್‌ನ ಮತಗಟ್ಟೆ ಸಂಖ್ಯೆ ೨೧೬ ಮತ್ತು ೨೧೭ ಹೊಂದಿರುವ ರೋಟರಿ ಶಾಲೆಗೆ ಡಿ.೧೪ರಂದು ಹೋದರೆ ಅಲ್ಲಿ ಗೇಟ್‌ಗೆ ಬೀಗ ಹಾಕಿತ್ತು.
ಸ್ವಚ್ಛತಾ ಕೆಲಸದ ಸಿಬ್ಬಂದಿಯೊಬ್ಬರನ್ನು ಕೇಳಿದಾಗ ಇಂದು ಶಾಲೆಗೆ ರಜೆ, ಯಾರೂ ಕೆಲಸ ನಿರ್ವಹಿಸುತ್ತಿಲ್ಲ. ನಾಳೆ ಬನ್ನಿ ಎಂದರು. ಈ ಸಂಬಂಧ ಮೈಸೂರು ಮಹಾ ನಗರಪಾಲಿಕೆ ಕಚೇರಿಯಲ್ಲಿ ವಿಚಾರಿಸಲು ಪಾಲಿಕೆ ಸಹಾಯವಾಣಿಗೆ ಕರೆ ಮಾಡಿದರೆ ಕರೆಯನ್ನು ಸ್ವೀಕರಿಸಲಿಲ್ಲ. ಇನ್ನಾದರೂ ಸಂಬಂಧಪಟ್ಟವರು ಮತದಾರರ ಪಟ್ಟಿ ಪರಿಶೀಲನೆ ಕುರಿತು ಸಾರ್ವಜನಿಕರಿಗೆ ಸರಿಯಾಗಿ ಮಾಹಿತಿ ನೀಡಬೇಕು ಹಾಗೂ ಚುನಾವಣಾ ಆಯೋಗ ನಿಗದಿಪಡಿಸಿದ ಸಮಯದಲ್ಲಿ ಆಯಾ ಸ್ಥಳದಲ್ಲಿದ್ದು, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವುದು ಅಗತ್ಯವಾಗಿದೆ.
-ಬಿ.ಎಂ.ಸುವರ್ಣ, ಕನಕದಾಸನಗರ, ಮೈಸೂರು
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…