ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ ಪ್ರತಿಷ್ಠೆಗಾಗಿ ನಡೆಸುತ್ತಿರುವ ಈ ಯುದ್ಧ ಸದ್ಯಕ್ಕಂತೂ ನಿಲ್ಲುವ ಸೂಚನೆಗಳು ಇಲ್ಲ. ಈ ಕಾರಣಕ್ಕಾಗಿಯೇ ಪ್ರಧಾನಿ ಮೋದಿ ಅವರು ಮುಂದಿನ ದಿನಗಳು ಕೋವಿಡ್ ದಿನಗಳ ಪರಿಸ್ಥಿತಿಗಿಂತಲೂ ಭೀಕರವಾಗಿರ ಬಹುದು, ದೇಶದ ಜನತೆ ಅದನ್ನು ಎದುರಿ ಸಲು ಸಿದ್ಧರಾಗಿರಬೇಕು ಎಂದು ಈಗಾಗಲೇ ಕರೆ ನೀಡಿದ್ದಾರೆ. ಅಲ್ಲದೆ ಕೆಲವು ಜಲತಾಣಗಳಲ್ಲಿ ದೇಶದಲ್ಲಿ ಲಾಕ್‌ಡೌನ್ ಜರಿಗೆ ಬರಬಹುದೆಂಬ ಸುದ್ದಿಯೂ ಹರಿದಾಡುತ್ತಿವೆ.
ಇಂದಿನ ಈ ಬಿಕ್ಕಟ್ಟುಗಳ ನಡುವೆ ಮಾ.೨೮ರಿಂದ ಐಪಿಎಲ್ ( ಇಂಡಿಯನ್ ಪ್ರೀಮಿಯರ್ ಲೀಗ್) ಎಂಬ ಹೆಸರಿನಲ್ಲಿ ಸಾವಿರಾರು ಕೋಟಿಗಳ ಶ್ರೀಮಂತರ ಜೂಜಿನ ಕ್ರಿಕೆಟ್ ಆರಂಭವಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಐಪಿಎಲ್ ಚಟಕ್ಕೆ ಬಿದ್ದು ಮನೆ – ಮಠ ಕಳೆದುಕೊಂಡವರಿದ್ದಾರೆ. ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲೂ ಐಪಿಎಲ್‌ನ ಅವಶ್ಯ ಏನಿದೆ? ಈ ಎಲ್ಲದರ ನಡುವೆ ಗುರುವಾರ ಮುಕ್ತಾಯಗೊಂಡ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಕೆಲವು ಶಾಸಕರು ನಮಗೆ ಐಪಿಎಲ್ ಫ್ರೀ ಪಾಸ್ ಕೊಡಿಸಿ ಎಂದು ಸಭಾಧ್ಯಕ್ಷರನ್ನು ಗೋಗರೆದಿರುವುದು ನಾಚಿಕೆಗೆಟ್ಟ ಸಂಗತಿ. ಪ್ರeವಂತ ನಾಗರಿಕರು ಈ ಸಲದ ಐಪಿಎಲ್‌ನ್ನು ರದ್ದುಪಡಿಸುವಂತೆ ಸರ್ಕಾರಕ್ಕೆ ಒತ್ತಡ ಹಾಕಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…