Andolana originals

ಓದುಗರ ಪತ್ರ: ಸ್ವಾಗತಾರ್ಹ ಸದಾಶಯ!

ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ ಸಂಗತಿ. ಬಡವರನ್ನು ಆರ್ಥಿಕವಾಗಿ ಉತ್ತೇಜಿಸಲು ರೂಪಿಸಲಾದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕೇ ವಿನಾ ಅನರ್ಹರು ದುರುಪಯೋಗಪಡಿಸಿಕೊಳ್ಳುವುದು ಸರ್ವಥಾ ಸಲ್ಲದು. ಹಾಗಾಗಿ ಸರ್ಕಾರ ಹೊಸದಾಗಿ ಅರ್ಜಿ ಕರೆಯುವ ಮತ್ತು ಫಲಾನುಭವಿಗಳಿಗೆ ಗುರುತಿನ ಚೀಟಿ ನೀಡುವಂಥ ಉಪಕ್ರಮಕ್ಕೆ ಮುಂದಾಗಿರುವುದು ಸಮಂಜಸವಾಗಿದೆ.

ಕರ್ನಾಟಕವನ್ನು ಭ್ರಷ್ಟಾಚಾರ ಮುಕ್ತ ರಾಜ್ಯವನ್ನಾಗಿ ರೂಪಿಸಲು ನೂತನ ಮುಖ್ಯಮಂತ್ರಿಗಳು ಪಣತೊಟ್ಟಿರುವುದು ನಿಜಕ್ಕೂ ಸಂತಸದ ಹಾಗೂ ಸ್ವಾಗತಾರ್ಹ ಸಂಗತಿ. ಹಳ್ಳಿಯಿಂದ ವಿಧಾನಸೌಧದವರೆಗೆ ಪಾರ್ಥೇನಿಯಂ ಕಳೆಯಂತೆ ಹಬ್ಬಿಕೊಂಡಿರುವ ಭ್ರಷ್ಟಾಚಾರವನ್ನು ಬೇರುಸಹಿತ ಕಿತ್ತುಹಾಕುವ ಅವಶ್ಯಕತೆ ಇದೆ. ಅಭಿವೃದ್ಧಿಗೆ ಮಾರಕವಾಗಿರುವ ಈ ಭ್ರಷ್ಟಾಚಾರ ಕಳೆಯನ್ನು ನಿರ್ಮೂಲನೆ ಮಾಡಿದರೆ ನಾಡು ಇನ್ನೂ ಹೆಚ್ಚಿನ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತದೆ.

-ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

3 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

3 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

3 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

4 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

4 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

4 hours ago