jagdeep dhankar
ಕಳೆದ ೧೦ ದಿನಗಳ ಹಿಂದಷ್ಟೇ ಸಮಾರಂಭವೊಂದರಲ್ಲಿ “೨೦೨೭ರವರೆಗಿನ ನನ್ನ ಅವಧಿಯನ್ನು ಪೂರೈಸುತ್ತೇನೆ. ದೇವರ ಇಚ್ಛೆ ಇದ್ದರೆ. . . ” ಎಂದು ಹೇಳಿದ್ದ ರಾಜ್ಯ ಸಭೆಯ ಸಭಾಪತಿಯೂ ಆಗಿದ್ದ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ಜು. ೨೧ರಂದು ರಾತ್ರಿ ದಿಢೀರನೇ ರಾಜೀನಾಮೆ ನೀಡಿದರು. ರಾಷ್ಟ್ರಪತಿಗಳು ಅದನ್ನು ಅಂಗೀಕರಿಸಿದ್ದಾರೆ ಕೂಡ.
ಧನಕರ್ ಅವರು ತಮ್ಮ ರಾಜೀನಾಮೆಗೆ ಅನಾರೋಗ್ಯದ ಕಾರಣ ನೀಡಿದ್ದಾರೆ. ಆದರೆ ಕೇಂದ್ರ ಸರ್ಕಾರ ಮತ್ತು ಧನಕರ್ ನಡುವೆ ಹೊಂದಾಣಿಕೆ ಇಲ್ಲದಿದ್ದುದೇ ಇದಕ್ಕೆ ಕಾರಣ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ರಾಜ್ಯಸಭೆಯಲ್ಲಿ ಪಹಾಲ್ಗಮ್ ಚರ್ಚೆಗೆ ಒಪ್ಪಿಗೆ ನೀಡಿದ್ದು, ಅದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರದೇ ಇದ್ದುದು ಹಾಗೂ ನ್ಯಾಯಮೂರ್ತಿ ವರ್ಮಾ ಅವರನ್ನು ಪದಚ್ಯುತಿಗೊಳಿಸುವ ತೀರ್ಮಾನವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸದೇ ಒಪ್ಪಿಗೆ ನೀಡಿದ ಪ್ರಕರಣಗಳು ಕಾರಣ ಎನ್ನಲಾಗಿದೆ. ಒಮ್ಮೆ ವಿರೋಧ ಪಕ್ಷ ಕಾಂಗ್ರೆಸ್‌ನವರು ಧನಕರ್ ಅವರನ್ನು ಪದಚ್ಯುತಗೊಳಿಸಲು ಯತ್ನ ನಡೆಸಿ ವಿಫಲರಾಗಿದ್ದರು. ಮಾಧ್ಯಮಗಳ ವರದಿ ನಿಜವಾಗಿದ್ದರೆ, ಈಗ ಆಡಳಿತ ಪಕ್ಷವೇ ವಿಪಕ್ಷದವರ ಆಸೆಯನ್ನು ಈಡೇರಿಸಿದಂತಾಯಿತು.
ನಿಜಕ್ಕೂ ಇದು ಸರ್ಕಾರದ ಸರ್ವಾಧಿಕಾರ ಧೋರಣೆಯನ್ನು ಬಿಂಬಿಸಿದೆ. ಧನಕರ್ ಅವರನ್ನು ಇಳಿಸಿ, ಬಿಹಾರದ ನಿತೀಶ್ ಕುಮಾರ್ ರವರನ್ನು ಉಪ ರಾಷ್ಟ್ರಪತಿ ಹುದ್ದೆಗೆ ಕೂರಿಸುವುದು, ಬಿಹಾರದಲ್ಲಿ ಬಿಜೆಪಿ ಪಕ್ಷದವರನ್ನು ಮುಖ್ಯಮಂತ್ರಿ ಮಾಡುವ ಹುನ್ನಾರವೂ ಇದೆ ಎಂದು ಹೇಳಲಾಗಿದೆ. ಅದೇನೇ ಇರಲಿ ಧನಕರ್ ಅವರಂತಹ ನೇರ ನುಡಿ ನಡೆಯ ವ್ಯಕ್ತಿ ತಮ್ಮ ಸ್ಥಾನದಿಂದ ಹಿಂದೆ ಸರಿದಿರುವುದರಿಂದ ಪ್ರಜಾಪ್ರಭುತ್ವ ಮತ್ತು ರಾಜ್ಯ ಸಭೆ ಬಡವಾದಂತಾಗಿದೆ.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…