Andolana originals

ಓದುಗರ ಪತ್ರ:  ಚಲನಚಿತ್ರ ರಂಗದಲ್ಲಿ ಏನಿದು ಗದ್ದಲ?

೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು, ದ್ವಾರಕೀಶ್, ರಾಜೇಶ್,. ವಜ್ರಮುನಿ, ಅಶ್ವತ್ಥ್ ಮೊದಲಾದ ನಟರು ಗುಂಪುಗಳಾಗಿ ಬೇರ್ಪಟ್ಟಿರಲಿಲ್ಲ. ಆ ದಿನ ಯಾವ ನಟರ ಸಿನಿಮಾಗಳು ಗೆದ್ದರೂ ಎಲ್ಲರೂ ಒಂದೆಡೆ ಸೇರಿ ಸಂಭ್ರಮಿಸುತಿದ್ದರು.

ಡಾ.ರಾಜಕುಮಾರ್ ಅಭಿನಯಿಸಿದ ಸಿನಿಮಾಗಳೆಲ್ಲ ೧೦೦ ದಿನಗಳಿಗೂ ಹೆಚ್ಚು ಕಾಲ ಪ್ರದರ್ಶನವಾಗುತ್ತಿತ್ತು. ಆಗ ಅಲ್ಲಿ ಸ್ನೇಹ ಪ್ರೀತಿ ವಿಶ್ವಾಸ ಎಲ್ಲೆಡೆ ಮನೆ ಮಾಡಿರುತ್ತಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ.  ಹಲವಾರು ನಟರು ಗುಂಪುಗಳಾಗಿ ಬೇರ್ಪಟ್ಟಿದ್ದು, ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಸ್ವಾರ್ಥದಿಂದ ನನ್ನ ಸಿನಿಮಾ ಮಾತ್ರ ಗೆಲ್ಲಬೇಕು, ಬೇರೆಯವರ ಸಿನಿಮಾ ಗೆಲ್ಲಬಾರದು ಎಂಬ ಅಸೂಯೆ ಮನೆ ಮಾಡಿದೆ. ಈ ದ್ವೇಷ ಸಾಧನೆ ಇದೇ ರೀತಿ ಮುಂದುವರಿದರೆ ಸಿನಿಮಾ ರಂಗದ ಮೇಲೆ ಪರಿಣಾಮ ಬೀರುತ್ತದೆ. ಯಾವುದೇ ಚಿತ್ರ ಚೆನ್ನಾಗಿದ್ದರೆ ಗೆಲ್ಲುತ್ತದೆ. ಹೀಗೆ ಜಗಳ ದ್ವೇಷ ಮಾಡಿ ನೆಚ್ಚಿನ ನಟರ ಅಭಿಮಾನಿಗಳ ಮನಸ್ಸನ್ನು ನೋಯಿಸಬೇಡಿ. ನಾವೆಲ್ಲರೂ ಒಂದೇ ಎನ್ನುವ ಭಾವನೆ ಮೂಡಲಿ. ಇದು ಸಿನಿಮಾ ರಂಗದ ಮೇಲೂ ಪರಿಣಾಮ ಬೀರುತ್ತದೆ.

-ಎಂ.ಎಸ್.ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

5 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

5 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

5 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

6 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

6 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

14 hours ago