ಮೈಸೂರು ಮಹಾ ನಗರ ಪಾಲಿಕೆ ಚುನಾಯಿತ ಸದಸ್ಯರ ಅವಧಿ ಮುಗಿದು ಎರಡು ವರ್ಷಗಳೆ ಕಳೆದಿದೆ. ಆದರೆ ಸರ್ಕಾರ ಚುನಾವಣೆ ನಡೆಸಲು ಮುಂದಾಗುತ್ತಿಲ್ಲ. ದಿನಾಂಕವನ್ನೂ ಪ್ರಕಟಿಸುತ್ತಿಲ್ಲ. ಇದರಿಂದ ನಗರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಈ ಮೊದಲು ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಪಾಲಿಕೆ ಸದಸ್ಯರಿಗೆ ದೂರವಾಣಿ ಕರೆ ಮಾಡಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುತ್ತಿದ್ದರು. ಈಗ ಚುನಾಯಿತ ಜನ ಪ್ರತಿನಿಧಿಗಳ ಅಧಿಕಾರಾವಧಿ ಮುಗಿದಿರುವುದರಿಂದ ಸಾರ್ವಜನಿಕರು ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಲು ಪಾಲಿಕೆ ಅಽಕಾರಿಗಳಿಗೆ ದೂರು ನೀಡಬೇಕಾಗಿದೆ. ರಾಜ್ಯ ಸರ್ಕಾರ ಕೂಡಲೇ ಮೈಸೂರು ಮಹಾ ನಗರ ಪಾಲಿಕೆಗೆ ಚುನಾವಣೆ ನಡೆಸುವ ಮೂಲಕ ನಗರದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕಾಗಿದೆ.
-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು





