ಕೊಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ದೇಶದಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಇದೆಯೇ ಎಂಬ ಪ್ರಶ್ನೆ ಮತ್ತೆ ಮುನ್ನೆಲೆಗೆ ಬಂದಿದೆ.
ಈ ಕೃತ್ಯವನ್ನು ಖಂಡಿಸಿ ದೇಶದ ಹಲವೆಡೆ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೊಲ್ಕತ್ತಾದ ಹೈಕೋರ್ಟ್ ಕೂಡ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದು, ಸೂಕ್ತ ತನಿಖೆಗೆ ಆದೇಶಿಸಿದೆ.
ಇದರ ಬೆನ್ನಲ್ಲೆ ಕೊಲ್ಕತ್ತಾದಲ್ಲಿ ಪ್ರತಿಭಟನೆ ನಿರತ JUST, ವೈದ್ಯರ ಮೇಲೆ ಹಾಗೂ ಆಸ್ಪತ್ರೆಯ ಮೇಲೆ ” for ಕಿಡಿಗೇಡಿಗಳ ಗುಂಪೊಂದು ದಾಳಿ ನಡೆಸಿದ್ದು, ಆಸ್ಪತ್ರೆಯನ್ನು ಧ್ವಂಸ ಮಾಡಿರುವುದಲ್ಲದೇ ವೈದ್ಯರ ಮೇಲೆಯೂ ಹಲ್ಲೆ ಮಾಡಿದೆ. ಈ ಘಟನೆಗಳನ್ನು ನೋಡಿದರೆ, ದೇಶದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲವೇನೋ ಅನಿಸುತ್ತದೆ. ಅಪ್ರಾಪ್ರ ವಯಸ್ಸಿನ ಬಾಲಕಿಯರಿಂದ ಹಿಡಿದು ಜೀವ ಉಳಿಸುವ ವೈದ್ಯರನ್ನೂ ಬಿಡದೆ ಅತ್ಯಾಚಾರ ಮಾಡಿ ಕೊಲೆ ಮಾಡುವಂತಹ ದುಷ್ಕೃತ್ಯಗಳು ಈ ದೇಶದಲ್ಲಿ ನಡೆಯುತ್ತಿವೆ ಎಂದರೆ ಈ ದೇಶದ ಆಡಳಿತ ವ್ಯವಸ್ಥೆ ಮಹಿಳೆಯರಿಗೆ ಎಷ್ಟರ ಮಟ್ಟಿಗೆ ರಕ್ಷಣೆ ಒದಗಿಸಿದೆ ಎಂಬುದು ತಿಳಿಯುತ್ತದೆ.
ಹೆಣ್ಣು ಮಕ್ಕಳು ತಾವು ಓದುವ, ಕೆಲಸ ಮಾಡುವ ಸ್ಥಳಗಳಲ್ಲಿಯೇ ದೌರ್ಜನ್ಯಗಳನ್ನು ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಕೌಟುಂಬಿಕವಾಗಿಯೂ ಅವರು ಅನೇಕ ಕಿರುಕುಳಗಳನ್ನು ಎದುರಿಸುತ್ತಿದ್ದಾರೆ. ಇದಕ್ಕೆ ಇತ್ತೀಚೆಗೆ ರಾಜಸ್ಥಾನದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಬೈಕ್‌ನಲ್ಲಿ ಕಟ್ಟಿ ಗ್ರಾಮದ ಬೀದಿ ಬೀದಿಗಳಲ್ಲಿ ಎಳೆದಾಡಿ ಹಿಂಸಿಸಿರುವ ಘಟನೆಯೇ ಸಾಕ್ಷಿ. ಇಂತಹ ದೌರ್ಜನ್ಯ ಪ್ರಕರಣಗಳು ನಾಗರಿಕ ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದ್ದು, ಸರ್ಕಾರ ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕಿದೆ. T
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…
ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…