ಓದುಗರ ಪತ್ರ
ಮಲೆ ಮಹದೇಶ್ವರ ವನ್ಯಧಾಮದ ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಮತ್ತು ನಾಲ್ಕು ಮರಿಗಳು ಅಸಹಜವಾಗಿ ಸಾವಿಗೀಡಾಗಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಅಳಿವಿನಂಚಿನಲ್ಲಿರುವ ಪ್ರಾಣಿಗಳ ಸಂರಕ್ಷಣೆಗಾಗಿ ಇಂದಿರಾ ಗಾಂಧಿ ಅವರು ಪ್ರಧಾನ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ನಮ್ಮ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಯಿತು. ರಾಜ್ಯದ ಅಭಯಾರಣ್ಯಗಳಲ್ಲಿ ಒಟ್ಟು ೫೬೩ ಹುಲಿಗಳಿದ್ದು, ಹುಲಿ ಸಂತತಿಯಲ್ಲಿ ಕರ್ನಾಟಕ ದೇಶದಲ್ಲೇ ೨ನೇ ಸ್ಥಾನದಲ್ಲಿದೆ.
ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ ೫ ಹುಲಿಗಳು ವಿಷ ಪ್ರಾಶನಕ್ಕೆ ಬಲಿಯಾಗಿವೆ ಎಂದು ಹೇಳಲಾಗುತ್ತಿದೆ. ಇದು ರಾಜ್ಯದ ವನ್ಯಜೀವಿ ಸಂರಕ್ಷಣಾ ಕ್ಷೇತ್ರದಲ್ಲಿ ನಡೆದಿರುವ ಅತಿ ದೊಡ್ಡ ದುರಂತ. ಇದು ಅರಣ್ಯ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿತನವನ್ನು ತೋರಿಸುತ್ತದೆ. ಮಲೆ ಮಹದೇಶ್ವರ ವನ್ಯ ಜೀವಿ ಧಾಮ ಹುಲಿ ಸಂತತಿ ಹೆಚ್ಚಳಕ್ಕೆ ಪೂರಕವಾದ ವಾತಾವರಣವನ್ನು ಹೊಂದಿದೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಹುಲಿಗಳ ಸಾವಿಗೆ ಕಾರಣಗಳನ್ನು ಪತ್ತೆಹಚ್ಚಬೇಕು, ಒಂದು ವೇಳೆ ವಿಷಪ್ರಾಶನ ಮಾಡಿದ್ದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು.
-ಮಹಾಂತೇಶ್, ಬಳ್ಳೂರುಹುಂಡಿ, ನಂಜನಗೂಡು ತಾಲ್ಲೂಕು
ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.15ರಂದು ಖ್ಯಾತ ನಟ ವಿ.ರವಿಚಂದ್ರನ್ ಅವರು…
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…