Andolana originals

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ ಎಂಬುದು ಸಾರ್ವಜನಿಕರಲ್ಲಿ ಬೇಸರ ಮೂಡಿಸಿದೆ. ಆದರೆ, ಇದು ಸಹಜ ಬೆಳವಣಿಗೆ. ಅಭಿಮನ್ಯುವಿನ ನೇತೃತ್ವದಲ್ಲಿ ಗಜಪಡೆ ಮೆರವಣಿಗೆ ಹೊರಟರೆ, ನೋಡುಗರ ಕಣ್ಣಿಗೆ ಹಬ್ಬವಾಗುತ್ತಿತ್ತು.

ಅಭಿಮನ್ಯು ದಸರೆಯಲ್ಲಿ ಮಾತ್ರವಲ್ಲದೆ, ಕಾಡಾನೆಗಳು, ಹುಲಿಗಳ ಸೆರೆ ಕಾರ್ಯಾಚರಣೆಯಲ್ಲಿಯೂ ಪಾಲ್ಗೊಳ್ಳುತ್ತಿದ್ದುದು ಗಮನಾರ್ಹ. ಅಭಿಮನ್ಯುವನ್ನು ದಸರಾ ಕಾರ್ಯಭಾರದಿಂದ ಬಿಡುಗಡೆ ಮಾಡುತ್ತಿರುವುದಕ್ಕೆ ವಯಸ್ಸಿನ ಕಾರಣ ನೀಡಲಾಗಿದೆ. ಅಲ್ಲದೆ, ಸುಪ್ರೀಂ ಕೋರ್ಟ್ ತೀರ್ಪು ಕೂಡ ೬೦ ವರ್ಷ ವಯಸ್ಸು ಮೀರಿದ ಆನೆಗಳ ಮೇಲೆ ಒತ್ತಡ ಹಾಕದಂತೆ ಸೂಚಿಸಿದೆ. ಇದರಿಂದಾಗಿ ಅಭಿಮನ್ಯು ಆನೆಯನ್ನು ದಸರಾ ಉತ್ಸವದಿಂದ ಕೈಬಿಡಲಾಗಿದೆ. ಹಾಗಾಗಿ ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊರಲಿರುವ ಆನೆ ಯಾವುದು ಎಂಬ ಕುತೂಹಲ ಜನರಲ್ಲಿ ಗರಿಗೆದರಿದೆ. ಇದೇ ತಿಂಗಳ ೨೬ರಂದು ದಸರಾ ಗಜಪಡೆ ಮೈಸೂರಿಗೆ ಆಗಮಿಸಲಿದೆ ಎನ್ನಲಾಗಿದೆ. ಬಹುಶಃ ಅಷ್ಟರೊಳಗೆ ಅಂಬಾರಿ ಆನೆ ಯಾವುದು ಎಂಬುದು ಇತ್ಯರ್ಥವಾದರೆ ಒಳ್ಳೆಯದು. ಅದರಿಂದ ಅಭಿಮನ್ಯು ನಿರ್ಗಮನದಿಂದ ಉಂಟಾಗಿರುವ ಬೇಸರ ಮರೆಯಾಗಬಹುದು. ಈ ಬಗ್ಗೆ ಸಂಬಂಧಪಟ್ಟವರು ಗಮನಹರಿಸಬೇಕು.

-ಜಿ.ಎಸ್.ಪ್ರಸಾದ್, ಗೋಕುಲಂ, ಮೈಸೂರು

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

12 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

12 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

13 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

13 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

13 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

13 hours ago