ಓದುಗರ ಪತ್ರ
1990ರಲ್ಲಿ ಎಪಿ.ಸಿಂಗ್ ಅವರು ತಮಗೆ ರಾಜಕೀಯ ಸಂಕಷ್ಟ ಎದುರಾದಾಗ ದಿಢೀರ್ ಎಂದು ಮಂಡಲ್ ಕಮಿಷನ್ ವರದಿಯನ್ನು ಜಾರಿಗೊಳಿಸಿ ಅದರ ಲಾಭದಿಂದ ರಾಜಕೀಯ ಸಂಕಷ್ಟದಿಂದ ದೂರಾದರು. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ವಿ.ಪಿ.ಸಿಂಗ್‌ರವರ ಮಾರ್ಗವನ್ನೇ ಅನುಸರಿಸುತ್ತಿದ್ದಾರೇನೋ ಅನಿಸುತ್ತದೆ. ಸದ್ಯ ಸಿದ್ದರಾಮಯ್ಯನವರಿಗೆ ಮುಡಾ ಹಗರಣ ತಲೆನೋವಾಗಿ ಪರಿಣಮಿಸಿದೆ. ಈ ಸಂಕಷ್ಟದಿಂದ ಪಾರಾಗಲು ಅವರು ಜಾತಿಗಣತಿ ವರದಿಯನ್ನು ಹೊರತಂದು ಅದರಿಂದ ರಾಜಕೀಯ ಲಾಭ ಪಡೆದುಕೊಳ್ಳಲು ಯತ್ನಿಸುತ್ತಿದ್ದಾರೇನೋ ಎಂಬ ಅನುಮಾನ ಶುರುವಾಗಿದೆ.
ಇಷ್ಟು ದಿನಗಳ ಕಾಲ ಜಾತಿ ಗಣತಿಯ ವರದಿಯನ್ನು ಬಿಡುಗಡೆ ಮಾಡಲು ಮುಂದಾಗದ ಸಿದ್ದರಾಮಯ್ಯನವರು ಈಗ ಅವಸರದಲ್ಲಿ ಸಿದ್ಧತೆ ಮಾಡಿಕೊಳ್ಳುವುದನ್ನು ನೋಡಿದರೆ ಅವರು ಜಾತಿ ಗಣತಿಯ ವರದಿಯನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುವ ತಂತ್ರಗಾರಿಕೆಯನ್ನು ರೂಪಿಸಿದ್ದಾರೇನೋ ಎಂಬ ಸಂದೇಹ ಮೂಡಿಸಿದೆ. ಜಾತಿ ಗಣತಿ ವರದಿ ಬಿಡುಗಡೆಯಾದ ಮೇಲೆ ‘ಮುಡಾ’ ಹಗರಣದ ವಿರುದ್ಧ ನಡೆಯುತ್ತಿರುವ ಹೋರಾಟ ಕ್ರಮೇಣ ಕಡಿಮೆಯಾಗಿ ಜಾತಿ ಹೆಸರಿನಲ್ಲಿ ಹೋರಾಟಗಳು ಆರಂಭಗೊಂಡರೂ ಆಶ್ಚರ್ಯವಿಲ್ಲ.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.
ಮಂಡ್ಯ: ಯುವಜನರು ಮಾದಕ ವ್ಯಸನದಿಂದ ದೂರವಿದ್ದರೆ ಆರೋಗ್ಯವಂತ ಸಮಾಜ ನಿರ್ಮಿಸಬಹುದು. ಯುವಜನತೆಯು ಮಾದಕ ವಸ್ತುಗಳಿಗೆ ಬಲಿಯಾಗದೆ ಅದರಿಂದ ದೂರವಿರಬೇಕು ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಶಿರಗೋಡು ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ರಥೋತ್ಸವ ಭಾನುವಾರ ಬೆಳಿಗ್ಗೆ…
ಟೆಹರಾನ್: ಇರಾನ್ ಮೇಲೆ ಇಸ್ರೇಲ್ ಅಮೆರಿಕ ಜಂಟಿಯಾಗಿ ದಾಳಿ ನಡೆಸಿದ ಪರಿಣಾಮ ಇದೀಗ ಇರಾನ್ ಕೂಡ ಪ್ರತೀಕಾರವಾಗಿ ಇಸ್ರೇಲ್ ಅಮೆರಿಕಾ…
ಕೊಡಗು: ಆನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮದೆ ಬೆಟ್ಟತ್ತೂರು ಗ್ರಾಮದ ಗಿರೀಶ್ ಎಂಬುವವರ ಪುತ್ರಿ ಪೂಜಾ…
ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಸೀಟು ಹಂಚಿಕೆ ಮಾತುಕತೆ ಆರಂಭವಾಗಿದೆ. ಜಾತ್ಯಾತೀತ ಪ್ರಗತಿಪರ ಮೈತ್ರಿಕೂಟದ ಪಕ್ಷಗಳಿಗೆ ಸೀಟು ಹಂಚಿಕೆ…
ರಾಮನಗರ: ಚನ್ನಪಟ್ಟಣ-ರಾಮನಗರ ಭಾಗದಲ್ಲಿ ಕಾಡಾನೆ ಉಪಟಳ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎರಡು ಕಾಡಾನೆಗಳ ಸೆರೆಗೆ ಸರ್ಕಾರ ಅನುಮತಿ ನೀಡಿದೆ. ಚನ್ನಪಟ್ಟಣದ ಬಿ.ವಿ.ಹಳ್ಳಿ…