Andolana originals

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ ಬಂದಾಗ ಮಾತ್ರ ದೇಶದ ನಿಜವಾದ ಪ್ರಗತಿ ಸಾಧ್ಯ ಎಂದು ಡಾ.ಅಂಬೇಡ್ಕರ್ ಹೇಳಿದ್ದಾರೆ. ರಾಜ್ಯ ಸರ್ಕಾರವು ಪರಿಶಿಷ್ಟ ಜತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಐಎಎಸ್, ಕೆಎಎಸ್, ಬ್ಯಾಂಕಿಂಗ್, ರೈಲ್ವೆ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡುವ ಕಾರ್ಯಕ್ರಮ ರೂಪಿಸಿದೆ ಅಷ್ಟೇ.

ಆದರೆ, ಕಳೆದ ೨-೩ ವರ್ಷಗಳಿಂದ ಈ ತರಬೇತಿಗೆ ಅರ್ಜಿಯನ್ನೇ ಆಹ್ವಾನಿಸಿಲ್ಲ. ಈಗಾಗಲೇ, ೨೦೨೫-೨೦೨೬ನೇ ಸಾಲು ಮುಗಿದು ಹೋಗಿದೆ. ಇನ್ನೂ ಯುಪಿಎಸ್‌ಸಿ ಪರೀಕ್ಷೆಗೂ ನೀಡುವಂತಹ ತರಬೇತಿಗೆ ಅರ್ಜಿ ಕರೆದಿಲ್ಲ. ಇದಕ್ಕೆ ನೈಜ ಕಾರಣವಾದರೂ ಏನು..? ಗಮನಿಸಬೇಕಾದ ಅಂಶವೆಂದರೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಣ್ಣ ಹುದ್ದೆಯಿಂದ ಹಿಡಿದು ಉನ್ನತ ಅಧಿಕಾರಿಗಳವರೆಗೂ ಬಹುತೇಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಧಿಕಾರಿಗಳೇ ಇದ್ದಾರೆ.

ನಿರ್ಧಾರ ತೆಗೆದುಕೊಳ್ಳುವ ಹಂತದಲ್ಲೂ ಹಾಗೂ ಕಾನೂನು ಕಟ್ಟಪ್ಪಣೆಗಳನ್ನು ಹೊರಡಿಸುವ ಸಮಾಜ ಕಲ್ಯಾಣ ಇಲಾಖೆಯ ಮಂತ್ರಿಗಳೂ ಬಹುತೇಕ ಪರಿಶಿಷ್ಟ ಜತಿಯವರೇ ಇರುತ್ತಾರೆ. ಹೀಗಿದ್ದರು ಈ ಪರಿ ನಿರ್ಲಕ್ಷ್ಯ ಆದರೂ ಏಕೆ..? ಸರ್ಕಾರದಿಂದ ಸಿಗುವಂಥ ಯೋಜನೆ ಸಂವಿಧಾನಾತ್ಮಕ ಹಕ್ಕು. ದಯೆ ಅಲ್ಲ. ಸಾಮಾಜಿಕ ನ್ಯಾಯ ಅಂದರೆ ಯಾವುದೇ ಯೋಜನೆಗಳು ನಿರಂತರವಾಗಿ ಸಿಗಬೇಕೇ ವಿನ ನಿಲ್ಲಬಾರದು. ಮುಖ್ಯಮಂತ್ರಿಗಳು ಇತ್ತ ಗಮನಹರಿಸಿ ಸಮಸ್ಯೆ ಪರಿಹರಿಸಲಿ.

– ಅನಿಲ್ ಕುಮಾರ್, ನಂಜನಗೂಡು

ಆಂದೋಲನ ಡೆಸ್ಕ್

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

19 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

19 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

19 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

20 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

20 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

1 day ago