Andolana originals

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು ಸಾರ್ವಜನಿಕರ ಬಳಕೆಗಿರುವ ಬೆಂಗಳೂರಿನ ‘ನಮ್ಮ ಮೆಟ್ರೋ’ ರೈಲಿನಲ್ಲಿ ಹಾಕಲಾಗಿದೆ. ಅದೂ ನಾಯಕ ನಟ ಯಶ್ ಬಂದೂಕನ್ನು ಹಿಡಿದಿರುವ ಪೋಸ್ಟರ್. ಉಗ್ರವಾದ ಖಂಡಿಸುವ, ಬಂದೂಕು ‘ಸಂಸ್ಕೃತಿ’ಯನ್ನು ಉಗ್ರವಾಗಿ ವಿರೋಧಿಸುವ ಮಾತುಗಳು ಕೇಳಿಬರುತ್ತಿರುವ ಈ ಸಂದರ್ಭದಲ್ಲಿ ಸಾವಿರಾರು ಜನರು(ಮಕ್ಕಳು, ಮಹಿಳೆಯರು, ಹಿರಿಯ ನಾಗರಿಕರು ಇರುತ್ತಾರೆ) ಸಂಚರಿಸುವ ಮೆಟ್ರೋದಲ್ಲಿ ಈ ರೀತಿಯ ಪೋಸ್ಟರ್ ಯಾವ ಪರಿಣಾಮ ಬೀರುತ್ತದೆ ಎಂಬುದನ್ನು ಸಾರ್ವಜನಿಕ ಸಾರಿಗೆ ಸಂಸ್ಥೆಯಾದ ಬಿಎಂಆರ್‌ಸಿಎಲ್‌ನ ಹಿರಿಯ ಅಧಿಕಾರಿಗಳು ಯೋಚಿಸಬೇಕಾಗುತ್ತದೆ. ಹಣ ಬರುತ್ತದೆ ಎಂದು ಇಂತಹ ಜಾಹೀರಾತುಗಳಿಗೆ ಪ್ರೋತ್ಸಾಹ ಕೊಡುವುದು ಸರಿಯೇ?. ಸಂಬಂಧಪಟ್ಟ ಅಧಿಕಾರಿಗಳು ಇನ್ನು ಮುಂದೆ ಇಂತಹ ಜಹೀರಾತುಗಳಿಗೆ ಅವಕಾಶ ಕೊಡಬಾರದು.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಒಟಿಟಿ ವೇದಿಕೆಗಳು ಕನ್ನಡ ಭಾಷೆಗೂ ಆದ್ಯತೆ ನೀಡಲಿ

ಇಂದು ಒಟಿಟಿ ವೇದಿಕೆಗಳಾದ ಅಮೆಜನ್ ಪ್ರೈಮ, ನೆಟ್‌ಫ್ಲಿಕ್ಸ್, ಡಿಸ್ನಿ+ಹಾಟ್‌ಸ್ಟಾರ್, ಜೀ೫, ಸೋನಿಲಿವ್ ಮುಂತಾದವುಗಳು ನಮ್ಮ ಮನರಂಜನೆಯ ಅವಿಭಾಜ್ಯ ಅಂಗವಾಗಿವೆ. ಮನೆಯಲ್ಲಿಯೇ…

4 mins ago

ಓದುಗರ ಪತ್ರ: ಖಾಸಗಿ ಕಾಲೇಜುಗಳ ಅನಗತ್ಯ ಶುಲ್ಕ ಹೆಚ್ಚಳ ನಿಯಂತ್ರಿಸಿ

ರಾಜ್ಯದಲ್ಲಿ ಸರ್ಕಾರಿ ವಿಶ್ವವಿದ್ಯಾನಿಲಯಗಳ ಸಂಯೋಜಿತ ಕೆಲವು ಖಾಸಗಿ ಕಾಲೇಜುಗಳು ವರ್ಷದಿಂದ ವರ್ಷಕ್ಕೆ ಕಾಲೇಜು ಅಭಿವೃದ್ಧಿಯ ಹೆಸರಿನಲ್ಲಿ, ವಿಶ್ವವಿದ್ಯಾನಿಲಯದ ಸೂಚನೆ ಹೆಸರಿನಲ್ಲಿ…

7 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮೂರಡಿಯ ಮೂರ್ತಿಗೆ ಡಾಕ್ಟರಾದ ಕೀರ್ತಿ

ಕೋರ್ಟ್ ಮೆಟ್ಟಿಲು ಏರಿ ವೈದ್ಯಕೀಯ ಸೀಟು ಪಡೆದ ಸಾಹಸಿ ಗುಜರಾತಿನ ಭಾವನಗರದ ಗೋರ್ಕಿ ಗ್ರಾಮದ ಗಣೇಶ್ ಬರಯ್ಯ ಎಂಟು ಜನ…

8 mins ago

ಬರದಲ್ಲೂ ಜಾನುವಾರುಗಳ ಮೇವಿಗಿಲ್ಲ ಕೊರತೆ

ಕೆ.ಬಿ.ರಮೇಶನಾಯಕ ಹೋಬಳಿಗೊಂದರಂತೆ ೨೯ ಮೇವು ಬ್ಯಾಂಕ್ ತೆರೆಯಲು ಪ್ರಸ್ತಾವನೆ  ಮೈಸೂರು: ಪೂರ್ವ ಮುಂಗಾರು ಮತ್ತು ಮುಂಗಾರು ಮಳೆ ಕೈಕೊಟ್ಟಿದ್ದರಿಂದಾಗಿ ಮಳೆಯಾಶ್ರಿತ…

13 mins ago

ಮಂಜಿನ ನಡುವೆ ಕೇಸರಿ ರೈಲು; ಕಾಗಿನೆರೆ ದೃಶ್ಯ ವೈರಲ್

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಧಾನಿ ಮೋದಿ, ರೈಲ್ವೆ  ಸಚಿವ ಅಶ್ವಿನಿ ವೈಷ್ಣವ್ ಗಮನ ಸೆಳೆದ ಪಶ್ಚಿಮಘಟ್ಟದ ಪ್ರಕೃತಿ ಸೌಂದರ್ಯ ಸೋಮವಾರಪೇಟೆ: ಪಶ್ಚಿಮಘಟ್ಟದ…

20 mins ago

ಕೋಟೆ ಟಿಎಪಿಸಿಎಂಎಸ್ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿ

ಮಂಜು ಕೋಟೆ ಗುರುವಾರ ಚುನಾವಣೆ: ಅಧಿಕಾರ ಹಿಡಿಯಲು ಪಕ್ಷಗಳ ಪೈಪೋಟಿ; ಜನರಲ್ಲಿ ಕುತೂಹಲ ಹೆಚ್.ಡಿ.ಕೋಟೆ: ಬಿಜೆಪಿ-ಜಾ.ದಳ ಮೈತ್ರಿ ಮತ್ತು ಕಾಂಗ್ರೆಸ್…

26 mins ago