Mysore
27
overcast clouds

Social Media

ಶನಿವಾರ, 07 ನವೆಂಬರ್ 2026
Light
Dark

ಓದುಗರ ಪತ್ರ: ಶಿಕ್ಷಣದ ಜವಾಬ್ದಾರಿಯಿಂದ ಸರ್ಕಾರ ನುಣುಚಿಕೊಳ್ಳುವುದು ಏಕೆ?

ಸರ್ಕಾರಿ ಶಾಲೆಗಳ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗಳಿಗೆ ಸಿಎಸ್‌ಆರ್(ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ) ಯೋಜನೆಯಡಿ ವಹಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಆತಂಕಕಾರಿ ಬೆಳವಣಿಗೆ. ಶಿಕ್ಷಣವು ಪ್ರತಿ ಮಗುವಿನ ಮೂಲಭೂತ ಹಕ್ಕು. ಅದನ್ನು ಸರ್ಕಾರದ ಜವಾಬ್ದಾರಿಯಿಂದ ದೂರ ಸರಿಸಿ ಖಾಸಗಿ ಸಂಸ್ಥೆಗಳ ಕೈಗೆ ಒಪ್ಪಿಸುವುದು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಅಸ್ತಿತ್ವಕ್ಕೆ ಸವಾಲಾಗಬಹುದು. ಸಿಎಸ್‌ಆರ್ ಹೆಸರಿನಲ್ಲಿ ಖಾಸಗಿ ಸಂಸ್ಥೆಗಳು ಶಾಲೆಗಳಿಗೆ ನೆರವು ನೀಡುವುದನ್ನು ಸ್ವಾಗತಿಸಬಹುದು. ಆದರೆ ಶಾಲೆಗಳ ನಿರ್ವಹಣೆ, ನೀತಿ ನಿರ್ಧಾರ ಹಾಗೂ ಆಡಳಿತದಲ್ಲಿ ಅವುಗಳ ಹಸ್ತಕ್ಷೇಪ ಹೆಚ್ಚಾದರೆ ಶಿಕ್ಷಣದ ಮೂಲ ಆಶಯವೇ ದಿಕ್ಕು ತಪ್ಪುವ ಅಪಾಯವಿದೆ. ಲಾಭದ ಉದ್ದೇಶ ವಿಲ್ಲದಿದ್ದರೂ ಸಂಸ್ಥೆಗಳ ಆದ್ಯತೆಗಳಿಗೆ ಅನುಗುಣವಾಗಿ ಶಿಕ್ಷಣದ ಗುಣಮಟ್ಟ, ಪಠ್ಯೇತರ ಚಟುವಟಿಕೆಗಳು ಹಾಗೂ ಸಂಪನ್ಮೂಲ ಹಂಚಿಕೆಯಲ್ಲಿ ಅಸಮಾನತೆ ಮೂಡಬಹುದು. ಇಂತಹ ಕ್ರಮದಿಂದ ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳ ಶಾಲೆಗಳು ನಿರ್ಲಕ್ಷ್ಯಕ್ಕೆ ಒಳಗಾಗುವ ಸಾಧ್ಯತೆಯಿದೆ. ಸರ್ಕಾರಿ ಶಾಲೆಗಳ ಮೇಲೆ ಅವಲಂಬಿತರಾಗಿರುವ ಬಡವರು, ದಲಿತರು, ಹಿಂದುಳಿದ ವರ್ಗಗಳ ಮಕ್ಕಳಿಗೆ ಸಮಾನ ಶಿಕ್ಷಣದ ಅವಕಾಶ ಕುಂಠಿತವಾಗಬಹುದು.

ಸರ್ಕಾರ ಖಾಸಗಿ ಸಂಸ್ಥೆಗಳ ನೆರವು ಪಡೆಯುವುದಕ್ಕಿಂತ ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ, ಶಿಕ್ಷಕರು, ಗುಣಮಟ್ಟದ ಬೋಧನೆ ಮತ್ತು ಸಮರ್ಪಕ ಅನುದಾನ ಒದಗಿಸುವತ್ತ ಗಮನಹರಿಸಬೇಕು. ಶಿಕ್ಷಣದ ಜವಾಬ್ದಾರಿಯಿಂದ ಸರ್ಕಾರ ನುಣುಚಿಕೊಳ್ಳದೆ, ಸರ್ಕಾರಿ ಶಾಲೆಗಳನ್ನು ಬಲಪಡಿಸುವುತ್ತ ದೃಢ ಹೆಜ್ಜೆ ಇಡಲಿ.

– ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

Tags:
error: Content is protected !!