Andolana originals

ಓದುಗರ ಪತ್ರ: ವಾಲ್ಮೀಕಿಯನ್ನು ಮರೆತದ್ದೇಕೆ?

ರಾಜ್ಯದ 18 ಆಕಾಶವಾಣಿ ಕೇಂದ್ರಗಳ ಪ್ರತಿದಿನ ಬೆಳಿಗ್ಗೆ 6.10ಕ್ಕೆ 5 ನಿಮಿಷಗಳ ಕಾಲ ‘ಚಿಂತನ’ ಎಂಬ ವಿಶೇಷ ಕಾರ್ಯಕ್ರಮವನ್ನು ಪ್ರಸಾದ ಮಾಡುತ್ತಿದ್ದು, ಕೇಳುಗರಿಗೆ ಉಪಯುಕ್ತ ಮಾಹಿತಿ ನೀಡುತ್ತಿವೆ.

ಈ ಕಾರ್ಯಕ್ರಮದಲ್ಲಿ ಅಂದಿನ ದಿನದ ವಿಶೇಷತ, ಹಬ್ಬ ಆದರ್ಶ ವ್ಯಕ್ತಿಗಳ ಜೀವನ ಚರಿತ್ರೆ, ಸಮಾಜಕ್ಕೆ ಕೊಡುಗೆ

ನೀಡಿದವರ ಬಗ್ಗೆ ವಿವಿಧ ಕ್ಷೇತ್ರಗಳ ಸಾಧಕರು ಮಾತನಾಡುತ್ತಾರೆ. ಆದರೆ, ಅ.17ರಂದು ರಾಮಾಯಣ ಮಹಾಕಾವ್ಯದ ಕರ್ತ್ಯ ‘ಮಹರ್ಷಿ ವಾಲ್ಮೀಕಿ ಜಯಂತಿ’ ಇದ್ದರೂ ಅವರ ಬಗ್ಗೆ ಈ ಕಾರ್ಯಕ್ರಮದಲ್ಲಿ ಯಾವುದೇ ಮಾಹಿತಿ ನೀಡದೇ ಹೋಗಿದ್ದು, ಕೇಳುಗರಲ್ಲಿ ಬೇಸರ ಮೂಡಿಸಿದೆ. ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ, ಮಹಾವೀರ ಜಯಂತಿ, ಬಸವ ಜಯಂತಿ, ಗಾಂಧಿ ಜಯಂತಿ, ಕೆಂಪೇಗೌಡರ ಜಯಂತಿ ಹೀಗೆ ಎಲ್ಲ ಜಯಂತಿಗಳಲ್ಲೂ ಅವರ ಬಗ್ಗೆ ಮಾಹಿತಿ ನೀಡುವ ಆಕಾಶವಾಣಿಯವರು ವಾಲ್ಮೀಕಿಯನ್ನು ಮಾತ್ರ ಮರೆತದ್ದು ಏಕೆ? ಇದು ಒಂದು ಸಮುದಾಯಕ್ಕೆ ಮಾಡಿದ ಅವಮಾನವಲ್ಲವೇ? ಆಕಾಶವಾಣಿಯ ನಿರ್ದೇಶಕರು ಮುಂದಿನ ದಿನಗಳಲ್ಲಾದರೂ ಹೀಗಾಗದಂತೆ ಎಚ್ಚರವಹಿಸಿ ಮಹನೀಯರ ಜಯಂತಿಗಳ ಬಗ್ಗೆ ಮಾಹಿತಿ ನೀಡುವಂತಾಗಲಿ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಭೀಕರ ರಸ್ತೆ ದುರಂತ: ಬಸ್‌ಗೆ ಬೆಂಕಿ ತಗುಲಿ 20ಕ್ಕೂ ಹೆಚ್ಚು ಮಂದಿ ಸಾವು

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್‌ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಸಜೀವ…

8 mins ago

ಓದುಗರ ಪತ್ರ:  ಮರ್ಯಾದಾ ಹತ್ಯೆಯಲ್ಲಿ ಜಾತಿ ಜೀವಂತಿಕೆ

ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು…

21 mins ago

ಓದುಗರ ಪತ್ರ:  ಚಲನಚಿತ್ರ ರಂಗದಲ್ಲಿ ಏನಿದು ಗದ್ದಲ?

೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು,…

22 mins ago

ಓದುಗರ ಪತ್ರ: ಚಾಮುಂಡಿಬೆಟ್ಟ ಯಥಾಸ್ಥಿತಿಯಲ್ಲೇ ಇರಲಿ

ನಾಡದೇವತೆಯಾದ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಬೆಟ್ಟವನ್ನು ಯಥಾಸ್ಥಿತಿಯಲ್ಲಿ ಇರುವಂತೆ ಉಳಿಸಿಕೊಳ್ಳುವುದು ಮೈಸೂರಿಗರ ಆದ್ಯ ಕರ್ತವ್ಯವಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ…

25 mins ago

ಓದುಗರ ಪತ್ರ: ಪುಸ್ತಕ ಉಡುಗೊರೆ ಸಂಸ್ಕೃತಿ ಬೆಳೆಸಿ

ಚಿತ್ರದುರ್ಗದ ಪೇಟೆ ಬೀದಿಯ ಉಡುಗೊರೆ (ಗಿಫ್ಟ್) ಮಾರಾಟ ಮಳಿಗೆ ಮಕ್ಕಳು ಮತ್ತು ಪೋಷಕರಿಂದ ತುಂಬಿ ಹೋಗಿತ್ತು. ಅಲ್ಲಿದ್ದ ಹುಡುಗರನ್ನು ಏಕೆ…

40 mins ago

ಪ್ರೀತಿ, ಸೌಹಾರ್ದತೆಯ ಸಂದೇಶ ಸಾರುವ ಕ್ರಿಸ್ತ ಜಯಂತಿ

- ಡಾ.ಐ.ಸೇಸುನಾಥನ್ ‘ಒಬ್ಬ ನಿನ್ನ ಬಲಗೆನ್ನೆಗೆ ಹೊಡೆದರೆ ಅವನಿಗೆ ನಿನ್ನ ಇನ್ನೊಂದು ಕೆನ್ನೆಗೂ ಹೊಡೆಯಲು ಅನುವು ಮಾಡಿಕೊಡು; ನಿನ್ನ ಮೇಲಂಗಿಯನ್ನು…

1 hour ago