ಓದುಗರ ಪತ್ರ
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು ಸಾರ್ವಜನಿಕರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಪ್ಪಣೆ ಕೊಡಿಸಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಲಂಚವಿಲ್ಲದೇ ಯಾವ ಕೆಲಸವೂ ಆಗುವುದಿಲ್ಲ ಎಂಬ ಸತ್ಯ ಅವರಿಗೆ ಗೊತ್ತಿಲ್ಲದ ವಿಚಾರವೇನಲ್ಲ. ಲಂಚ ಎಂಬ ಹಗಲು ದರೋಡೆಯಿಂದ ಜನಸಾಮಾನ್ಯರು ಹೈರಾಣರಾಗುತ್ತಿದ್ದಾರೆ. ಒಂದೆರಡು ವರ್ಷಗಳ ಹಿಂದೆ ಜರಿಗೆ ತಂದ ಇ- ಖಾತೆ ಅಥವಾ ಇ-ಸ್ವತ್ತು ಮಾಡಿಸಿಕೊಳ್ಳಲು ಅಥವಾ ಎ ಖಾತಾ/ ಬಿ ಖಾತಾ ಪಡೆದುಕೊಳ್ಳಲು ಸಾರ್ವಜನಿಕರು ಹತ್ತಾರು ಸಾವಿರ ರೂಪಾಯಿಗಳನ್ನು ಲಂಚದ ರೂಪದಲ್ಲಿ ಸಂಬಂಧಪಟ್ಟ ನೌಕರನಿಗೆ ಅಥವಾ ಅಧಿಕಾರಿಗೆ ನೀಡಲೇ ಬೇಕು. ಲಂಚ ನೀಡದ ವ್ಯಕ್ತಿಗಳ ಅರ್ಜಿಗಳು ಎ ಒಂದು ಕಡೆ ಬಿಸಾಡಿಲ್ಪಟ್ಟಿರುತ್ತವೆ. ಲಂಚ ಕೊಟ್ಟಾಗ ಮಾತ್ರ ಅಂತಹ ಅರ್ಜಿಗಳಿಗೆ ಮರುಜೀವ ಬರುತ್ತದೆ. ಈ ರೀತಿ ಲಂಚ ಎಂಬುದು ಸಾರ್ವಜನಿಕ ರಂಗದಲ್ಲಿ ಬೃಹದಾಕಾರವಾಗಿ ಬೆಳೆದು ಬಂದಿದೆ. ಎಷ್ಟೇ ಪ್ರಯತ್ನ ಪಟ್ಟರೂ ಲಂಚಾಸುರನ ಸಂಹಾರವಾಗದೇ ದಿನೇ ದಿನೇ ತನ್ನ ಆಕಾರ ಮತ್ತು ಸ್ವರೂಪವನ್ನು ವೃದ್ಧಿಸಿಕೊಳ್ಳುತ್ತಲೇ ಇದ್ದಾನೆ.
‘ಅವನಿಗೆ’ ರಾಜಕಾರಣಿಗಳ ಪರೋಕ್ಷ ಬೆಂಬಲ ಅಥವಾ ಕುಮ್ಮಕ್ಕು ಇರುತ್ತದೆ ಎಂಬುದು ಜನಸಾಮಾನ್ಯರಿಗೆ ತಿಳಿದೇ ಇದೆ. ಇಂತಹ ಸಂದರ್ಭದಲ್ಲಿ ಲಂಚ ನಿರ್ಮೂಲನೆಗೆ ಹೊರಟಿರುವ ಡಿ.ಕೆ.ಶಿವಕುಮಾರ್‌ರವರ ಪ್ರಯತ್ನ ವ್ಯರ್ಥ ಕಸರತ್ತಲ್ಲದೇ ಬೇರೇನೂ ಅಲ್ಲ.
-ಕೆ.ವಿ.ವಾಸು,
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…