Andolana originals

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು ಬಿಟ್ಟು ವಿಷಯಾಂತರವಾದರೆ ಸಮಾರಂಭದ ಗಂಭೀರತೆಗೆ ಭಂಗ ತರುತ್ತದೆ ಎಂಬುದಕ್ಕೆ ಉದಾಹರಣೆಯಾಗಿದೆ ಈ ಕಾರ್ಯಕ್ರಮ.

ಮೊನ್ನೆ ಭಾನುವಾರ ಮೈಸೂರಿನ ಮಾನಸಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬಿಎಂಶ್ರೀ ಸಭಾಂಗಣದಲ್ಲಿ ವೈದ್ಯ ಸಾಹಿತಿ ಹಾಗೂ ಹೃದ್ರೋಗ ತಜ್ಞ ಡಾ.ಎಸ್. ಪಿ. ಯೋಗಣ್ಣ ಅವರು ಬರೆದಿರುವ ‘ವೈದ್ಯನ ೧೦೮ ಕವನಗಳು’ ಮತ್ತು ‘ವೈದ್ಯನ ನುಡಿ ಮುತ್ತುಗಳು’ ಎಂಬ ಎರಡು ಕವನ ಸಂಕಲನಗಳ ಬಿಡುಗಡೆಯ ಸಮಾರಂಭದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಕನ್ನಡ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮುಕುಂದರಾಜು ಅವರು, ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ವಿಶೇಷ ಪರಿಷ್ಕರಣಾ ಪ್ರಕ್ರಿಯೆ (ಎಸ್‌ಐಆರ್) ಬಗ್ಗೆ ತಮ್ಮ ತೀವ್ರ ಅಸಮಾಧಾನವನ್ನು ಹೊರಹಾಕಿದರು. ಜತೆಗೆ ಉದಾಹರಣೆಯೊಂದನ್ನು ನೀಡಿದರು.

ಉದ್ದೇಶಪೂರ್ವಕವಾಗಿ ಇಂತಹ ಕೆಲಸಗಳು ನಡೆಯುತ್ತಿವೆ ಎಂದೂ ರಾಜಕಾರಣಿಗಳ ಶೈಲಿಯಲ್ಲಿ ಮಾತನಾಡಿದ್ದು, ನೆರೆದಿದ್ದ ಸಾಹಿತ್ಯಾಸಕ್ತರಿಗೆ ಮುಜುಗರ ಉಂಟು ಮಾಡುವಂತಿತ್ತು. ಇದು ಪುಸ್ತಕ ಬಿಡುಗಡೆ ಸಮಾರಂಭದ ಪಾವಿತ್ರ್ಯತೆಯನ್ನೇ ಹಾಳುಮಾಡುವಂತಿತ್ತು ಎಂಬ ಭಾವನೆ ಅನೇಕರಲ್ಲಿ ಮೂಡಿದ್ದರೆ ಅಚ್ಚರಿಯಿಲ್ಲ. ಅದೂ ಅಲ್ಲದೆ ವಿಶೇಷ ಮತದಾರರ ಪರಿಷ್ಕರಣೆ ಇನ್ನೂ ನಡೆಯುತ್ತಿದ್ದು, ಬಿಟ್ಟು ಹೋಗಿರುವ ಅರ್ಹ ಮತದಾರರನ್ನು ಸೇರಿಸಲು ಇನ್ನೂ ಅವಕಾಶ ಇರುವುದರಿಂದ ಈಗಲೂ ಸೇರಿಸಲು ಅವಕಾಶ ಇದೆ. ಇವರಿಗೆ ಎಲ್ಲಿ ಏನು ಮಾತಾನಾಡ ಬೇಕು ಎಂಬ ಕನಿಷ್ಠ eನವೂ ಇಲ್ಲವಾಯಿತೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಇನ್ನು ಮುಂದಾದರೂ ಇಂತಹ ಕಾರ್ಯಕ್ರಮಗಳಲ್ಲಿ ಆದಷ್ಟು ಕಾರ್ಯಕ್ರಮಕ್ಕೆ ಸೀಮಿತವಾದಷ್ಟು ಮಾತನಾಡಿದರೆ ಸಹ್ಯವೆನಿಸುತ್ತದೆ.

 -ಬೂಕನಕೆರೆ ವಿಜೇಂದ್ರ, ಮೈಸೂರು

ಆಂದೋಲನ ಡೆಸ್ಕ್

Recent Posts

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

5 hours ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

5 hours ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

5 hours ago

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…

5 hours ago

ಮನುಷ್ಯನ ಬೆನ್ನೇರಿರುವ ಎಐ ಬೇತಾಳ

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…

5 hours ago

ವಂದೇ ಮಾತರಂ: ದೇಶಪ್ರೇಮ-ಬಹುತ್ವದ ಭಿನ್ನ ವ್ಯಾಖ್ಯಾನ

೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…

5 hours ago