Andolana originals

ಓದುಗರ ಪತ್ರ: ವಿನಾಕಾರಣ ರಸ್ತೆ ಬಂದ್ ಏಕೆ?‌

ಮೈಸೂರಿನ ವಾಲ್ಮೀಕಿ ರಸ್ತೆಯಿಂದ ಹುಣಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿರುವ ಮಸೀದಿಯ ಸಮೀಪದ ರಸ್ತೆಗೆ ವಿನಾಕಾರಣ ಬ್ಯಾರಿಕೇಡ್‌ಗಳನ್ನು ಹಾಕಿ ಬಂದ್ ಮಾಡಲಾಗಿದೆ. ಹುಣಸೂರು ರಸ್ತೆಯಿಂದ ಎಡಕ್ಕೆ ಮುಕ್ತವಾಗಿ ಸಂಚರಿಸಲು ಅವಕಾಶವಿರುವ ಈ ರಸ್ತೆಯಲ್ಲಿ ಯಾವುದೇ ಕಾಮಗಾರಿಗಳು ನಡೆಯದೇ ಇದ್ದರೂ ಸುಖಾಸುಮ್ಮನೆ ಕಾಮಗಾರಿ ಚಾಲ್ತಿಯಲ್ಲಿದೆ ಎಂಬ ಫಲಕವನ್ನು ಹಾಕಿಕೊಂಡು ರಸ್ತೆಯನ್ನು ಬಂದ್ ಮಾಡಲಾಗಿದೆ. ಹೀಗೆ ವಿನಾಕಾರಣ ರಸ್ತೆಯನ್ನು ಮುಚ್ಚಿರುವುದರಿಂದ ಸಾರ್ವಜನಿಕರು ದಸರಾ ಟ್ರಾಫಿಕ್‌ನ ನಡುವೆಯೂ ಈ ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ಅನುಭವಿಸುವಂತಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಇಲ್ಲಿ ಹಾಕಿರುವ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿ ಮುಕ್ತವಾಗಿ ಸಂಚರಿಸಲು ಅನುವು ಮಾಡಿಕೊಡಬೇಕಿದೆ.
-ಎಂ. ರಾಮಕೃಷ್ಣ, ಪಡುವಾರಹಳ್ಳಿ, ಮೈಸೂರು

 

 

andolana

Recent Posts

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

1 hour ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

2 hours ago

ಮೇಲುಕೋಟೆಯಲ್ಲಿ ಸರಣಿ ಕಳ್ಳತನ

ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್‌ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…

2 hours ago

ಕಾರ್ಯಾಚರಣೆ ತಂಡವನ್ನೇ ಹಿಮ್ಮೆಟ್ಟಿಸಿದ ಕಾಡಾನೆಗಳು!

ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…

2 hours ago

ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಎಫ್‌ಐಆರ್‌ ದಾಖಲು

ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್‌ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಜ್ಯ ಕಾಂಗ್ರೆಸ್‌…

11 hours ago

ಅಸ್ಸಾಂ: ಹಳಿ ತಪ್ಪಿದ ಲೋಕಮಾನ್ಯ ತಿಲಕ ಎಕ್ಸ್‌ಪ್ರೆಸ್‌ ರೈಲು

ಅಸ್ಸಾಂ: ಅಸ್ಸಾಂನ ಅಗರ್ತಲಾದಿಂದ ಮುಂಬೈಗೆ ತೆರಳುತ್ತಿದ್ದ ಲೋಕಮಾನ್ಯ ತಿಲಕ್‌ ಎಕ್ಸ್‌ಪ್ರೆಸ್‌ ರೈಲು ಡಿಬಾಲೊಂಗ್‌ ನಿಲ್ದಾಣದ ಬಳಿ ಹಳಿ ತಪ್ಪಿವೆ ಎಂದು…

13 hours ago