Andolana originals

ಓದುಗರ ಪತ್ರ: ರೈಲ್ವೆ ಕೆಳಸೇತುವೆ ಅಗಲೀಕರಣ ಮಾಡಿ

ಮೈಸೂರಿನ ನ್ಯೂ ಕಾಂತರಾಜ್ ಅರಸ್ ರಸ್ತೆಯ ಕನ್ನೇಗೌಡನ ಕೊಪ್ಪಲಿನ ಪ್ರವೇಶ ದ್ವಾರದಲ್ಲಿರುವ ರೈಲ್ವೆ ಕೆಳಸೇತುವೆ ಅತ್ಯಂತ ಚಿಕ್ಕದಾಗಿದ್ದು, ಈ ಕೆಳಸೇತುವೆಯ ಮೂಲಕವೇ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತವೆ. ರೈಲ್ವೇ ಸ್ಟೇಷನ್, ಗ್ರಾಮಾಂತರ ಬಸ್ ನಿಲ್ದಾಣ, ಬೆಂಗಳೂರಿಗೆ ಪ್ರಯಾಣ ಮಾಡುವವರು, ಕೋರ್ಟ್ -ಕಚೇರಿಗಳಿಗೆ ಹೋಗುವವರು, ಸಿಟಿ ಮಾರ್ಕೆಟ್‌ಗೆ ಹೋಗುವವರು ಹಾಗೂ ವ್ಯಾಪಾರ ವಹಿವಾಟಿಗೆ ಹೋಗುವವರು ಈ ಕೆಳಸೇತುವೆಯನ್ನು ಹಾದುಹೋಗಬೇಕಾಗಿದೆ.

ಈ ಕೆಳಸೇತುವೆ ಚಿಕ್ಕದಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಒಮ್ಮೊಮ್ಮೆ ಕನ್ನೇಗೌಡನಕೊಪ್ಪಲಿನ ರಸ್ತೆ ಉದ್ದಕ್ಕೂ ವಾಹನ ದಟ್ಟಣೆಯಾಗುತ್ತದೆ. ಇದರಿಂದಾಗಿ ಇಲ್ಲಿ ಸಣ್ಣಪುಟ್ಟ ಅಪಘಾತಗಳೂ ಸಂಭವಿಸುತ್ತಲೇ ಇವೆ. ಈ ಕೆಳ ಸೇತುವೆ ಎಡಭಾಗಕ್ಕೆ ಸಾಕಷ್ಟು ಜಾಗ ಇರುವುದರಿಂದ, ಈ ಕೆಳ ಸೇತುವೆಯನ್ನು ಅಗಲೀಕರಣ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಈ ಬಗ್ಗೆ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.

– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

7 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

9 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

9 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

9 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

10 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

10 hours ago