ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ ಪುರುಷರಿಗಷ್ಟೇ ಪ್ರಾತಿನಿಧ್ಯ ದೊರೆಯುತ್ತಿದ್ದು, ಬೆರಳೆಣಿಕೆಯಷ್ಟು ಮಾತ್ರ ಮಹಿಳಾ ಪ್ರತಿನಿಧಿಗಳಿರುತ್ತಾರೆ. ಇನ್ನೂ ಕೆಲವು ಕಡೆ ಮಹಿಳೆಯರಿಗೆ ಪ್ರಾತಿ ನಿಧ್ಯವೇ ಇರುವುದಿಲ್ಲ.
ರಾಜಕಾರಣಿಗಳು, ಅಧಿಕಾರಿಗಳು ಸಭೆ ಸಮಾರಂಭಗಳಲ್ಲಿ ಮಾತೆತ್ತಿದರೆ ಮಹಿಳೆಯರು ಪುರುಷರಷ್ಟೇ ಸಮಾನರು, ಮಹಿಳೆಯರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಹೇಳುವುದು ಕ್ಷೀಷೆಯಾಗಿದೆಯೇ ಹೊರತು ಮಹಿಳೆಯರು ಪುರುಷರಷ್ಟೇ ಸರಿಸಮಾನರು ಎಂಬ ದೃಷ್ಟಿಯಿಂದ ನೋಡದೇ ಇರುವುದು ವಿಷಾದಕರ ಸಂಗತಿಯಾಗಿದೆ. ಶಾಸನ ಸಭೆಗಳಲ್ಲಿ ಶೇ. ೩೩ರಷ್ಟು ಮಹಿಳಾ ಮೀಸಲಾತಿಗಾಗಿ ದನಿ ಎತ್ತುತ್ತಿರುವ ಈ ಸಂದರ್ಭದಲ್ಲಿ ಸಾಂಸ್ಕೃತಿಕ ವೇದಿಕೆಗಳಲ್ಲೇ ಮಹಿಳಾ ಪ್ರಾತಿನಿಧ್ಯ ಇಲ್ಲದಿರುವುದು ಪುರುಷ ಪ್ರಧಾನ ವ್ಯವಸ್ಥೆಯ ಮೇಲಧಿಕಾರವನ್ನು ಎತ್ತಿ ತೋರಿಸುತ್ತದೆ. ಇದು ಖಂಡನೀಯ. ಸಂಬಂಧಪಟ್ಟವರು ಇನ್ನು ಮುಂದಾದರೂ ಮಹಿಳೆಯರಿಗೆ ಪ್ರಾತಿನಿಧ್ಯ ನೀಡುವುದು ಅತ್ಯಗತ್ಯ.
– ಸುಶೀಲ, ಡಾ.ರತಿರಾವ್, ಎಚ್.ಎಂ. ಹೇಮಲತ, ನಾ.ದಿವಾಕರ, ಮೈಸೂರು
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…