ಓದುಗರ ಪತ್ರ
ಸರ್ಕಾರ ಹಾಗೂ ಸಾರ್ವಜನಿಕರ ನಿರ್ಲಕ್ಷ್ಯದಿಂದಾಗಿ ಇಂದು ಸರ್ಕಾರಿ ಶಾಲೆಗಳು ಶಿಥಿಲಾವಸ್ಥೆ ತಲುಪಿದ್ದು, ಕೆಲವು ಶಾಲಾ ಕಟ್ಟಡಗಳು ಬೀಳುವ ಸ್ಥಿತಿಯಲ್ಲಿವೆ. ಪೋಷಕರು ತಮ್ಮ ಪ್ರತಿಷ್ಠೆಗಾಗಿ ಡೊನೇಷನ್ ನೀಡಿ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುತ್ತಿದ್ದು, ಸರ್ಕಾರಿ ಶಾಲೆಗಳಲ್ಲಿ ದಾಖಲಾಗುವ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಇದರಿಂದಾಗಿ ಎಷ್ಟೋ ಸರ್ಕಾರಿ ಶಾಲೆಗಳು ಮುಚ್ಚಿ ಹೋಗಿವೆ.
ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಡ್ಡಾಯವಾಗಿ ದಾಖಲಿಸಬೇಕು. ಹೀಗಾದರೆ ಸರ್ಕಾರದಿಂದ ಶಾಲಾಭಿವೃದ್ಧಿಗೆ ಹೆಚ್ಚಿನ ಅನುದಾನ ಸಿಗುತ್ತದೆ. ಸಾರ್ವಜನಿಕರು ದಾನಿಗಳ ನೆರವಿನಿಂದ ಶಾಲೆಗಳಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು. ಈ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬೇಕು.
– ಅನುಶ್ರೀ, ಶಿವಮೊಗ್ಗ
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…