ಓದುಗರ ಪತ್ರ
ಹರಿದು ಹಂಚಿ ಹೋಗಿದ್ದ ಕನ್ನಡ ಮಾತನಾಡುವ ಪ್ರದೇಶಗಳನ್ನು ಒಂದುಗೂಡಿಸಿ, ಮೈಸೂರು ರಾಜ್ಯಕ್ಕೆ (ನಂತರ ಕರ್ನಾಟಕ) ರೂಪ ಕೊಟ್ಟ ಹಿರಿಯ ಚೇತನಗಳನ್ನು ನಾವು ಮರೆಯುವಂತಿಲ್ಲ. ಆಲೂರು ವೆಂಕಟರಾಯರು, ಕೆಂಗಲ್ ಹನುಮಂತಯ್ಯನವರು, ದ. ರಾ.ಬೇಂದ್ರೆಯವರು, ಕುವೆಂಪುರವರಂತಹ ಮಹನೀಯರು ಸಾಹಿತ್ಯ, ಹೋರಾಟ ಮತ್ತು ಆಡಳಿತದಲ್ಲಿ ಕನ್ನಡ ಭಾಷೆಗೆ ನೀಡಿದ ಕೊಡುಗೆ ಅಪರಿಮಿತ. ಅವರ ದೂರದೃಷ್ಟಿ ಮತ್ತು ಕನ್ನಡಾಭಿ ಮಾನದ ಫಲವಾಗಿ ಕರ್ನಾಟಕ ರಾಜ್ಯ ರೂಪುಗೊಂಡಿದೆ.
ಹಲ್ಮಿಡಿ ಶಾಸನದಿಂದ ಆರಂಭಗೊಂಡು, ಜ್ಞಾನಪೀಠ ಪ್ರಶಸ್ತಿಗಳ ಗರಿಮೆಯವರೆಗೆ ಕನ್ನಡದ ಹಿರಿಮೆ ಅಜರಾಮರ. ಇಂತಹ ಶ್ರೀಮಂತ ಇತಿಹಾಸ ಮತ್ತು ಸಂಸ್ಕೃತಿಯನ್ನು ಹೊಂದಿರುವ ನಮ್ಮ ನಡುವೆಯೇ, ನಗರ ಪ್ರದೇಶಗಳಲ್ಲಿ ಕನ್ನಡ ಬಂದರೂ ಮಾತನಾಡಲು ಹಿಂಜರಿಯುವ ಮನಸ್ಥಿತಿ ಬೆಳೆಯುತ್ತಿರುವುದು ಆತಂಕಕಾರಿ. ಆಂಗ್ಲಭಾಷಾ ವ್ಯಾಮೋಹ ಕನ್ನಡಿಗರನ್ನು ಅವರದೇ ಮಾತೃಭಾಷೆಯಿಂದ ದೂರ ಮಾಡುತ್ತಿದೆ. ಇಂಗ್ಲಿಷ್ ಕಲಿತರೆ ಮಾತ್ರ ಉತ್ತಮ ಉದ್ಯೋಗ, ಪ್ರತಿಷ್ಠೆ ಎಂಬ ಭ್ರಮೆ ಸಮಾಜದಲ್ಲಿ ಆಳವಾಗಿ ಬೇರೂರಿದೆ.
ಜ್ಞಾನಾರ್ಜನೆಗೆ ಯಾವುದೇ ಭಾಷೆ ಅಡ್ಡಿಯಾಗಬಾರದು ನಿಜ. ಆದರೆ, ಬೇರೆ ಭಾಷೆಯ ವ್ಯಾಮೋಹಕ್ಕೆ ಬಿದ್ದು ಮಾತೃಭಾಷೆಯನ್ನು ಕಡೆಗಣಿಸುವುದು, ನಮ್ಮ ಅಸ್ಮಿತೆಯನ್ನೇ ಕಳೆದುಕೊಂಡಂತೆಯೇ ಸರಿ. ೭೦ನೇ ಕನ್ನಡ ರಾಜ್ಯೋತ್ಸವದ ಈ ಹೊತ್ತಿನಲ್ಲಿ, ಪ್ರತಿಯೊಬ್ಬ ಕನ್ನಡಿಗನೂ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಮನೆ, ಕಚೇರಿ ಮತ್ತು ಸಾರ್ವಜನಿಕ ಜೀವನದಲ್ಲಿ ಕನ್ನಡವನ್ನು ಬಳಸುವ ಮೂಲಕ, ನಮ್ಮ ಮುಂದಿನ ಪೀಳಿಗೆಗೆ ಕನ್ನಡದ ಶ್ರೀಮಂತಿಕೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಮಾತೃಭಾಷೆಯ ಮೇಲಿನ ಪ್ರೀತಿ ಕೇವಲ ನವೆಂಬರ್ ೧ಕ್ಕೆ ಸೀಮಿತವಾಗದೆ, ಪ್ರತಿದಿನವೂ ಹರಿಯುವ ಜೀವಂತ ಪ್ರವಾಹವಾಗಬೇಕು.
-ಬಿ.ಗಣೇಶ, ಕೆ.ಜಿ.ಕೊಪ್ಪಲು,ಮೈಸೂರು
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…