ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯಡಿಯಲ್ಲಿ ವಿಮೆ ಸೌಲಭ್ಯ ಪಡೆದಿರುವವರ ಕುಟುಂಬ ವರ್ಷಕ್ಕೆ ೫ ಲಕ್ಷರೂ. ವೆಚ್ಚದ ಚಿಕಿತ್ಸಾ ಸೌಲಭ್ಯ ಪಡೆಯಬಹುದಾಗಿದೆ. ಆದರೆ ಈ ಯೋಜನೆಯನ್ನು ಡಯಾಲಿಸಿಸ್ ಚಿಕಿತ್ಸಾ ಸೌಲಭ್ಯದಿಂದ ಹೊರಗಿಟ್ಟಿರುವುದು ಬೇಸರದ ಸಂಗತಿಯಾಗಿದೆ.
ಪ್ರತಿ ಬಾರಿ ಡಯಾಲಿಸಿಸ್‌ಗೆ ೧,೩೦೦ ರೂ. ಪಾವತಿಸಬೇಕು. ವಾರಕ್ಕೆ ೩ ಬಾರಿ ೧೩೦೦ ರೂ. ಕೊಟ್ಟು ಡಯಾಲಿಸಿಸ್ ಮಾಡಿಸುವುದು ಬಡ ಹಾಗೂ ಕೂಲಿ ಕಾರ್ಮಿಕರಿಗೆ ಕಷ್ಟವಾಗುತ್ತದೆ. ಹಣದ ಕೊರತೆಯಿಂದಾಗಿ ಸಕಾಲಕ್ಕೆ ಚಿಕಿತ್ಸೆ ದೊರೆಯದಿದ್ದರೆ ರೋಗಿ ಸಾವನ್ನಪ್ಪುವ ಸಾಧ್ಯತೆಯಿರುತ್ತದೆ. ಆದ್ದರಿಂದ ಸರ್ಕಾರ ಈ ಬಗ್ಗೆ ತುರ್ತು ಗಮನ ಹರಿಸಿ ಯಶಸ್ವಿನಿ ಯೋಜನೆಯಲ್ಲಿ ಡಯಾಲಿಸಿಸ್ ವೆಚ್ಚ ಭರಿಸುವಂತಾಗಲಿ. ಹಾಗೂ ಇದೇ ರೀತಿ ಹೃದಯ ಸಂಬಂಧಿ ಅಂಜಿಯೋಗ್ರಾಮ್ ವೆಚ್ಚವನ್ನು ಕೂಡ ಯಶಸ್ವಿನಿ /ಬಿ ಪಿ ಎಲ್ ವರ್ಗದವರಿಗೆ ಭರಿಸುವಂತೆ ಸರ್ಕಾರ ಆದೇಶ ಮಾಡಲಿ.
-ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…
ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…
ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…
ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…
ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…