Andolana originals

ಓದುಗರ ಪತ್ರ:  ಸ್ಥಳೀಯ ವಾಹಿನಿಗಳಲ್ಲಿ ಯುವ ದಸರಾ ನೇರ ಪ್ರಸಾರವಾಗಲಿ

ಈ ಬಾರಿ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕಳೆದ ಬಾರಿ ಯುವ ದಸರಾ ಕಾರ್ಯಕ್ರಮವನ್ನು ಮೈಸೂರಿನಿಂದ ಹೊರಗೆ ಉತ್ತನಹಳ್ಳಿಯಲ್ಲಿ ಏರ್ಪಡಿಸಲಾಗಿತ್ತು.ಇದರಿಂದ ನಗರದ ಜನರಿಗೆ ಕಾರ್ಯಕ್ರಮ ವೀಕ್ಷಣೆಗೆ ಹೋಗಲು ಸಾಧ್ಯವಾಗಲಿಲ್ಲ. ಇಷ್ಟು ವರ್ಷಗಳೂ ಯುವ ದಸರಾ ಕಾರ್ಯಕ್ರಮವನ್ನು ಮೈಸೂರಿನ ಸ್ಥಳೀಯ ವಾಹಿನಿಗಳು ನೇರ ಪ್ರಸಾರ ಮಾಡುತ್ತಿದ್ದವು. ಇದರಿಂದ ಕಾರ್ಯಕ್ರಮಕ್ಕೆ ಹೋಗಲಾಗದವರು, ಹಿರಿಯರು, ಹೆಂಗಸರು, ಮಕ್ಕಳು ಮನೆಯಲ್ಲೇ ಕುಳಿತು ನೇರ ಪ್ರಸಾರದಲ್ಲಿ ವೀಕ್ಷಿಸಿ ಆನಂದಿಸುತ್ತಿದ್ದರು. ಆದರೆ ಕಳೆದ ಬಾರಿ ಆಯೋಜಕರು ಯುವ ದಸರಾ ನೇರ ಪ್ರಸಾರದ ಹಕ್ಕನ್ನು ಖಾಸಗಿ ಸಂಸ್ಥೆಗೆ ನೀಡಿದ್ದ ಕಾರಣಕ್ಕೆ ಜನರು ನೇರ ಪ್ರಸಾರ ವೀಕ್ಷಣೆ ಮಾಡಲು ಸಾಧ್ಯವಾಗಲಿಲ್ಲ. ಯುವ ದಸರಾ ಆಯೋಜಿಸಲು ಸರ್ಕಾರ ನೀಡುವ ಹಣ ಜನರ ತೆರಿಗೆಯ ಹಣವಾಗಿದೆ. ಆದ್ದರಿಂದ ಈ ಬಾರಿ ಅಂತಹ ಲೋಪವಾಗದಂತೆ, ಯಾರಿಗೂ ಹಕ್ಕನ್ನು ನೀಡದೇ ಸ್ಥಳೀಯ ವಾಹಿನಿಗಳಲ್ಲಿ ಪ್ರಸಾರ ಮಾಡಲು ಜಿಲ್ಲಾಡಳಿತ, ಸರ್ಕಾರ ಅನುಮತಿ ನೀಡಲಿ. ಈ ಬಗ್ಗೆ ಉಸ್ತುವಾರಿ ಸಚಿವರು ಗಮನಹರಿಸಬೇಕಿದೆ.

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಬೋನಿಗೆ ಬಿದ್ದ ಚಿರತೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಟಿ.ನರಸೀಪುರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ಟಿ.ನರಸೀಪುರ ತಾಲ್ಲೂಕಿನ ಶ್ರೀರಂಗರಾಜಪುರ ಗ್ರಾಮದಲ್ಲಿ ನಡೆದಿದೆ. ಕಳೆದ…

1 hour ago

ನನಗೂ ಎಂಎಲ್‌ಸಿ ಸ್ಥಾನ ಕೊಡಿ : ರಕ್ತದಲ್ಲಿ ಸಹಿ ಹಾಕಿ ವರಿಷ್ಠರಿಗೆ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತ

ಮೈಸೂರು: ಎಂಎಲ್‌ಸಿ ಸ್ಥಾನಕ್ಕಾಗಿ ರಕ್ತದಲ್ಲಿ ಸಹಿ ಮಾಡಿ ಮನವಿ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಬ್ಬರು ತಮ್ಮ…

2 hours ago

ಓದುಗರ ಪತ್ರ:  ದೇವಾಲಯಗಳ ಬಳಿ ಪೊಲೀಸ್ ಗಸ್ತು ಹೆಚ್ಚಿಸಿ

ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…

4 hours ago

ನಂಜನಗೂಡು | ಚಲಿಸುತ್ತಿದ್ದ ಬಸ್‌ ಬೆಂಕಿಗಾಹುತಿ ; 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು

ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…

4 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿ

ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…

4 hours ago

ಓದುಗರ ಪತ್ರ: ಸಬ್ ಅರ್ಬನ್ ಬಸ್ ನಿಲ್ದಾಣದ ಬಳಿ ಆಟೋ ಸಂಚಾರ ನಿಯಂತ್ರಿಸಿ

ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…

5 hours ago