ಎಚ್.ಡಿ.ಕೋಟೆ ತಾಲ್ಲೂಕಿನ ಎಚ್.ಮಟಕೆರೆ ಗೇಟ್‌ನಲ್ಲಿರುವ ಬಸ್ ತಂಗುದಾಣ ಶಿಥಿಲವಾಗಿದ್ದು, ಬೀಳುವ ಸ್ಥಿತಿಯಲ್ಲಿದೆ. ಇದರಿಂದಾಗಿ ಬಸ್ ಗಾಗಿ ಕಾಯುವ ಪ್ರಯಾಣಿಕರಿಗೆ ಬೇಸಿಗೆಯಲ್ಲಿ ಹಾಗೂ ಮಳೆಗಾಲದಲ್ಲಿ ತೀವ್ರ ತೊಂದರೆ ಯಾಗುತ್ತಿದೆ.
ಗ್ರಾಮ ಪಂಚಾಯಿತಿಯವರು ಹಾಗೂ ಜನ ಪ್ರತಿನಿಧಿಗಳು ಕೂಡಲೇ ಶಿಥಿಲವಾಗಿರುವ ಬಸ್ ತಂಗುದಾಣವನ್ನು ತೆರವುಗೊಳಿಸಿ ಹೊಸದಾಗಿ ಬಸ್ ತಂಗುದಾಣವನ್ನು ನಿರ್ಮಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್. ಡಿ. ಕೋಟೆ ತಾ.





