Mysore
30
scattered clouds

Social Media

ಸೋಮವಾರ, 18 ಮೇ 2026
Light
Dark

ಓದುಗರ ಪತ್ರ: ಮಹಾರಾಣಿ ಕಾಲೇಜಿನಲ್ಲಿ ಕ್ಯಾಂಟೀನ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ ವಿದ್ಯಾರ್ಥಿಗಳು ಮನೆ ಅಥವಾ ಹಾಸ್ಟೆಲ್‌ನಿಂದ ತಿಂಡಿ ತಿನ್ನದೇ ನೇರವಾಗಿ ತರಗತಿಗಳಿಗೆ ಹಾಜರಾಗುತ್ತಿದ್ದಾರೆ.

ಬಿಡುವಿನ ವೇಳೆಯಲ್ಲಿ ಉಪಾಹಾರ ಸೇವಿಸಲು ಹಾಗೂ ಮಧ್ಯಾಹ್ನದ ಊಟ ಮಾಡಲು ಸೂಕ್ತವಾದ ಕ್ಯಾಂಟೀನ್ ಸೌಲಭ್ಯ ಇಲ್ಲದೇ ವಿದ್ಯಾರ್ಥಿನಿ ಯರು ದಿನಪೂರ್ತಿ ಹಸಿವಿನಿಂದ ಬಳಲುವಂತಾಗಿದೆ. ಸಂಬಂಧಪಟ್ಟವರು ಕೂಡಲೇ ಮಹಾರಾಣಿ ಕಾಲೇಜು ಕ್ಯಾಂಪಸ್‌ನಲ್ಲಿ ಸುಸಜ್ಜಿತ ಕ್ಯಾಂಟಿನ್ ಆರಂ ಭಿಸುವ ಮೂಲಕ ವಿದ್ಯಾರ್ಥಿನಿಯರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

-ಶಾಂಭವಿ, ದ್ವಿತೀಯ ಬಿಎ, ಪತ್ರಿಕೋದ್ಯಮ, ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು

Tags:
error: Content is protected !!