ಕೆ.ಆರ್.ನಗರ: 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ, ಹಾಲು ಉತ್ಪಾದಕರಿಗೆ, ಸಿಇಒಗಳಿಗೆ ಅನುಕೂಲ
ಭೇರ್ಯ ಮಹೇಶ್
ಕೆ.ಆರ್.ನಗರ: ಪಟ್ಟಣದ ಎಪಿಎಂಸಿ ಆವರಣದಲ್ಲಿ ಮೈಸೂರು ಜಿಲ್ಲಾ ಹಾಲು ಒಕ್ಕೂಟದ ವತಿಯಿಂದ ೧ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸುಸಜ್ಜಿತ ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಉಪ ಕಚೇರಿ ಲೋಕಾರ್ಪಣೆಗೆ ಸಿದ್ಧವಾಗಿದೆ.
ತಾಲ್ಲೂಕಿನ ಹಾಲು ಉತ್ಪಾದಕರಿಗೆ ಹಾಗೂ ಸಿಇಒಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಒಕ್ಕೂಟದ ಒಂದು ಕೋಟಿ ರೂ. ಅನುದಾನದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆ.
ನೂತನವಾಗಿ ನಿರ್ಮಾಣ ಮಾಡಿರುವ ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಕಟ್ಟಡಕ್ಕೆ ಕ್ಷೀರ ಕ್ರಾಂತಿಯ ಪಿತಾಮಹ ಡಾ.ವರ್ಗೀಸ್ ಕುರಿಯನ್ ಭವನ ಎಂದು ನಾಮಕರಣ ಮಾಡಲಾಗಿದೆ. ಶೃಂಗಾರ ಗೊಂಡ ಈ ಕಟ್ಟಡದಲ್ಲಿ ಉಪ ವ್ಯವಸ್ಥಾಪಕರ ಕಚೇರಿ ಒಳಗೊಂಡಂತೆ 6 ವಿಸ್ತರಣಾಧಿಕಾರಿಗಳ ಕಚೇರಿ, ಸಭಾಂಗಣವನ್ನು ಸುಸಜ್ಜಿತವಾಗಿ ನಿರ್ಮಿಸಲಾಗಿದೆ.
ಹಾಲು ಉತ್ಪಾದಕರ ರಾಸುಗಳಿಗೆ ಬೇಕಾಗುವ ಔಷಧಗಳು, ಪಶು ಆಹಾರ ಸಾಮಗ್ರಿಗಳು ಸೇರಿದಂತೆ ಇನ್ನಷ್ಟು ಸರಕು ಸಂಗ್ರಹ ಮಾಡಲು ಸ್ಥಳಾವಕಾಶವಿರುವ ಈ ಕಟ್ಟಡವು ಹಾಲು ಒಕ್ಕೂಟದ ಬಹುದಿನಗಳ ಕನಸಾಗಿತ್ತು.
ಹಾಲು ಉತ್ಪಾದಕರ ಉಪ ಕಚೇರಿಯು ಕಳೆದ ಹಲವು ವರ್ಷಗಳಿಂದ ಪಟ್ಟಣದ ಹುಣಸೂರು ರಸ್ತೆಯಲ್ಲಿ ನಂತರ ಎಪಿಎಂಸಿ ಕಚೇರಿಯ ಒಂದು ಬಾಡಿಗೆ ಕಟ್ಟಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದುದನ್ನು ಮನಗಂಡ ಒಕ್ಕೂಟದ ನಿರ್ದೇಶಕರು ಹಾಗೂ ಅಧಿಕಾರಿ ವರ್ಗದವರು ಕಚೇರಿಗೆ ಸ್ವಂತ ಕಟ್ಟಡ ಹೊಂದಲು ಬಯಸಿದ್ದರು.
ಎಲ್ಲರ ಸಹಕಾರದಿಂದ ಉಪಕಚೇರಿಯ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದ್ದು, ಲೋಕಾರ್ಪಣೆ ಹಂತಕ್ಕೆ ಬಂದಿದೆ. ಶೀಘ್ರದಲ್ಲಿ ಉದ್ಘಾಟಿಸಲಾಗುವುದು ಎಂದು ಈ ಭಾಗದ ಮೈಸೂರು ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ಎ.ಟಿ.ಸೋಮಶೇಖರ್ ಅವರು ಪತ್ರಿಕೆಗೆ ತಿಳಿಸಿದ್ದಾರೆ.
ಈಗಾಗಲೇ ಕಟ್ಟಡ ಉದ್ಘಾಟನೆಗೆ ಸಿದ್ದವಾಗಿದ್ದು, ಕಟ್ಟಡದಲ್ಲಿ ಸಾಂಕೇತಿಕವಾಗಿ ಪೂಜೆ ನೆರವೇರಿಸಲಾಗಿದೆ. ಶೀಘ್ರದಲ್ಲಿ ಉದ್ಘಾಟನೆಗೆ ಕ್ರಮ ವಹಿಸಲಾಗುವುದು.
-ಡಾ.ಪ್ರವೀಣ್ ಪತ್ತಾರ್, ಉಪ ವ್ಯವಸ್ಥಾಪಕರು, ಮೈಮುಲ್ ಉಪ ಕಚೇರಿ, ಕೆ.ಆರ್.ನಗರ.
ತಾಲ್ಲೂಕಿನ ಹಾಲು ಉತ್ಪಾದಕರ ಹಾಗೂ ಡೇರಿ ಕಾರ್ಯದರ್ಶಿ ಗಳ(ಸಿಇಒ) ಹಿತದೃಷ್ಟಿಯಿಂದ ಉಪ ಕಚೇರಿಗೆ ಒಂದು ಸ್ವಂತ ಕಟ್ಟಡ ನಿರ್ಮಾಣ ಆಗಬೇಕೆಂಬುದು ಎಲ್ಲರ ಒತ್ತಾಸೆಯಾಗಿತ್ತು. ಅಂತೆಯೇ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದೆ. ಈ ಕಟ್ಟಡಕ್ಕೆ ಕ್ಷೀರ ಕ್ರಾಂತಿ ಮಾಡಿದ ಕ್ಷೀರ ಪಿತಾಮಹ ಡಾ. ವರ್ಗೀಸ್ ಕುರಿಯನ್ ಭವನ ಎಂದು ನಾಮಕರಣ ಮಾಡಲಾಗಿದೆ. ಸುಸಜ್ಜಿತ ಉಪ ಕಚೇರಿಯನ್ನು ಶಾಸಕರು ನಿಗದಿಪಡಿಸಿದ ದಿನದಂದು
ಉದ್ಘಾಟನೆ ಮಾಡಲಾಗುವುದು.
-ಎ.ಟಿ.ಸೋಮಶೇಖರ್, ಮೈಸೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…