ಕೃಷಿ ಚಟುವಟಿಕೆ ಚುರುಕುಗೊಂಡ ಬೆನ್ನಲ್ಲೇ ಕೃಷಿ ಇಲಾಖೆಯಿಂದ ಜಾಗೃತಿ; ಬೆಳೆ ವಿಮೆ ಸದುಪಯೋಗಪಡಿಸಿಕೊಳ್ಳಲು ಮನವಿ
ನವೀನ್ ಡಿಸೋಜ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕು ಗೊಂಡಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಸದುಪಯೋಗಪಡೆದುಕೊಳ್ಳಬೇಕು ಎಂದು ಕೃಷಿ ಇಲಾಖೆ ಮನವಿ ಮಾಡಿದೆ.
ಜಿಲ್ಲೆಯಲ್ಲಿ ಕೆಲ ವರ್ಷಗಳಿಂದ ಹವಾಮಾನ ವೈಪರೀತ್ಯ ಕಂಡುಬರುತ್ತಿದೆ. ೨೦೨೩ರ ಮಾನ್ಸೂನ್‌ನಲ್ಲಿ ಬರ ಪರಿಸ್ಥಿತಿ ಇದ್ದರೆ, ೨೦೨೪ರಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿತ್ತು. ಈ ಬಾರಿ ಮೇ ತಿಂಗಳಲ್ಲಿಯೇ ಹೆಚ್ಚು ಮಳೆ ಸುರಿದಿದ್ದು, ಜೂನ್ ತಿಂಗ ಳಲ್ಲಿಯೂ ವಾಡಿಕೆಗಿಂತ ಹೆಚ್ಚು ಮಳೆ ದಾಖಲಾಗಿದೆ. ಹೀಗಾಗಿ ರೈತರು ತಡವಾಗಿ ಬಿತ್ತನೆ ಆರಂಭಿಸುತ್ತಿದ್ದು, ಮುಂದಿನ ದಿನಗಳಲ್ಲಿಯೂ ಅತಿವೃಷ್ಟಿಯಿಂದ ನಷ್ಟ ಅನುಭವಿಸುವ ಆತಂಕದಲ್ಲಿ ದ್ದಾರೆ. ಇಂತಹ ಸಂದರ್ಭದಲ್ಲಿ ಬೆಳೆವಿಮೆ ಮಾಡಿಸುವುದು ಸೂಕ್ತ ಎಂಬುದು ಕೃಷಿ ಇಲಾಖೆ ಅಧಿಕಾರಿಗಳ ಸಲಹೆಯಾಗಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಮುಂತಾದ ಪ್ರಾಕೃತಿಕ ವಿಕೋಪ ಹಾಗೂ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿದೆ.
ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಕೂಡ ಪರಿಗಣಿಸಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಗೆ ಸಂಬಂಽಸಿದಂತೆ, ಓರಿಯಂಟಲ್ ಜನರಲ್ ಇನ್ಶುರೆನ್ಸ್ ಕಂಪೆನಿಯನ್ನು ಬೆಳೆ ವಿಮೆ ಕಾರ್ಯಕ್ಕೆ ಆಯ್ಕೆ ಮಾಡಲಾಗಿದೆ. ವಿಮಾ ಅರ್ಜಿಗಳು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಲಭ್ಯವಿದ್ದು, ಈ ಯೋಜನೆಯಡಿ ಅರ್ಜಿಯನ್ನು ಬ್ಯಾಂಕ್‌ಗಳಲ್ಲಿ ಸಲ್ಲಿಸಿ ನೋಂದಾಯಿಸಿಕೊಳ್ಳ ಬಹುದಾಗಿದೆ.
ಫಸಲ್ ವಿಮಾ ಯೋಜನೆಯಡಿ ಕೊಡಗು ಜಿಲ್ಲೆಯಲ್ಲಿ ಭತ್ತ ಮತ್ತು ಮುಸುಕಿನಜೋಳವನ್ನು ಸೇರ್ಪಡೆಮಾಡಲಾಗಿದೆ. ನೀರಾವರಿ ಭೂಮಿಯ ಭತ್ತವಾಗಿದ್ದರೆ ವಿಮಾ ಮೊತ್ತ ಪ್ರತಿ ಹೆಕ್ಟೇರ್‌ಗೆ ೯೩,೨೫೦ ರೂ. ದೊರೆಯಲಿದ್ದು, ಇದಕ್ಕೆ ಕಂತು ಹೆಕ್ಟೇರ್‌ಗೆ ೧,೮೬೫ ರೂ., ಒಂದು ಎಕರೆಗೆ ೭೪೬ ರೂ. ಪಾವತಿಸಬೇಕಿದೆ. ಮಳೆಯಾಶ್ರಿತದಲ್ಲಿ ಭತ್ತ ಬೆಳೆದಿದ್ದರೆ ಪ್ರತಿ ಹೆಕ್ಟೇರ್‌ಗೆ ೬೩,೭೫೦ ರೂ. ವಿಮಾ ಮೊತ್ತವಿದ್ದು, ೧,೨೭೫ ರೂ. ವಿಮಾ ಕಂತು ಇದೆ. ಒಂದು ಎಕರೆಗೆ ೫೧೦ ರೂ. ಪಾವತಿಸಬೇಕಿದೆ. ಈ ಎರಡಕ್ಕೂ ಆಗಸ್ಟ್ ೧೬ ಕೊನೆಯ ದಿನವಾಗಿದೆ. ಮಳೆಯಾಶ್ರಿತ ಭೂಮಿಯಲ್ಲಿ ಮುಸುಕಿನಜೋಳಕ್ಕೆ ಪ್ರತಿ ಹೆಕ್ಟೇರ್‌ಗೆ ೫೬,೫೦೦ ರೂ. ವಿಮಾ ಮೊತ್ತವಿದ್ದು, ೧,೧೩೦ರೂ. ವಿಮಾ ಕಂತು ಇದೆ. ಒಂದು ಎಕರೆಗೆ ೪೫೨ ರೂ. ವಿಮಾ ಕಂತು ಪಾವತಿಸಬೇಕಿದೆ. ನೋಂದಣಿಗೆ ಜು.೩೧ ಕೊನೆಯ ದಿನವಾಗಿದೆ.
ವರ್ಷದಿಂದ ವರ್ಷಕ್ಕೆ ಭತ್ತ ಬೆಳೆಯುವವರ ಸಂಖ್ಯೆ ಕೊಡಗಿನಲ್ಲಿ ಇಳಿಕೆ ಕಾಣುತ್ತಿದ್ದರೂ, ಈಗ ಜಿಲ್ಲೆಯಲ್ಲಿ ಅಂದಾಜು ೧೫ ಸಾವಿರಕ್ಕೂ ಅಧಿಕ ರೈತರಿದ್ದು, ಭತ್ತ ಹಾಗೂ ಮುಸುಕಿನ ಜೋಳ ಬೆಳೆಯುತ್ತಿದ್ದಾರೆ. ಇಷ್ಟು ಜನರ ಪೈಕಿ ಕಳೆದ ವರ್ಷ ಫಸಲ್ ವಿಮಾ ಯೋಜನೆಯಡಿ ನೋಂದಣಿಯಾದವರು ಕೇವಲ ೬೨೩ ಮಾತ್ರ. ಆದರೆ, ಇವರಲ್ಲಿ ಅರ್ಧದಷ್ಟು ಮಂದಿ ಅಂದರೆ ೩೨೩ ಮಂದಿ ವಿಮೆ ಹಣ ಪಡೆದುಕೊಂಡಿದ್ದಾರೆ. ಬಿತ್ತನೆ, ನಾಟಿವೈಫಲ್ಯ, ಮಧ್ಯಂತರ ಬೆಳೆ ನಷ್ಟ, ಇಳುವರಿ ಕೊರತೆ, ಸ್ಥಳೀಯ ವಿಪತ್ತುಗಳು, ನೈಸರ್ಗಿಕ ವಿಕೋಪಗಳು, ಪ್ರತಿಕೂಲ ಹವಾಮಾನದಿಂದ ಇಳುವರಿ ನಷ್ಟ ಹಾಗೂ ಕಟಾವು ನಂತರದ ನಷ್ಟಗಳನ್ನೂ ಪರಿಗಣಿಸಿ ವಿಮಾ ಪರಿಹಾರ ದೊರಕುತ್ತದೆ.
ನೋಂದಣಿ ಹೇಗೆ?
” ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾಯೋಜನೆಯಡಿ ರೈತರು ಅರ್ಜಿಯೊಂದಿಗೆ ಪಹಣಿ, ಬ್ಯಾಂಕ್ ಪಾಸ್ ಪುಸ್ತಕ ಮತ್ತು ಆಧಾರ್ ಸಂಖ್ಯೆಯನ್ನು ನೀಡಿ ನೋಂದಾಯಿಸಿಕೊಳ್ಳಬೇಕು. ಯೋಜನೆಯ ಮಾಹಿತಿಯನ್ನು ಸಂರಕ್ಷಣೆ ತಂತ್ರಾಂಶದಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಹೋಬಳಿಯ ರೈತ ಸಂಪರ್ಕ ಕೇಂದ್ರ, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದಾಗಿದೆ.”
” ಜಿಲ್ಲೆಯಲ್ಲಿ ಕಳೆದ ವರ್ಷ ಹೆಚ್ಚು ರೈತರು ವಿಮಾ ಯೋಜನೆಗೆ ನೋಂದಣಿ ಮಾಡಿಸಿಕೊಂಡಿದೆ. ಈ ಬಾರಿ ಪ್ರತಿ ಗ್ರಾಪಂ ಮಟ್ಟದಲ್ಲಿ ಕರ ಪತ್ರಗಳ ಮೂಲಕ ಮತ್ತು ರೈತರನ್ನು ನೇರವಾಗಿ ಭೇಟಿಯಾಗಿ ಜಾಗೃತಿ ಮೂಡಿಸಲಾಗುತ್ತಿದೆ. ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ಬೆಳೆ ನಷ್ಟದಿಂದ ಪಾರಾಗಲು ಬೆಳೆವಿಮೆ ಮಾಡಿಸುವುದು ಸೂಕ್ತ.”
-ಡಾ.ಬಿ.ಎಸ್.ಚಂದ್ರಶೇಖರ್, ಜಂಟಿ ನಿರ್ದೇಶಕರು, ಕೃಷಿ ಇಲಾಖೆ
ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…