Andolana originals

ಫಸಲ್‌ ಭೀಮಾ ಯೋಜನೆ ನೋಂದಣಿ ಆರಂಭ

ಕೃಷಿ ಚಟುವಟಿಕೆ ಚುರುಕುಗೊಂಡ ಬೆನ್ನಲ್ಲೇ ಕೃಷಿ ಇಲಾಖೆಯಿಂದ ಜಾಗೃತಿ; ಬೆಳೆ ವಿಮೆ ಸದುಪಯೋಗಪಡಿಸಿಕೊಳ್ಳಲು ಮನವಿ 

ನವೀನ್ ಡಿಸೋಜ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕು ಗೊಂಡಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಸದುಪಯೋಗಪಡೆದುಕೊಳ್ಳಬೇಕು ಎಂದು ಕೃಷಿ ಇಲಾಖೆ ಮನವಿ ಮಾಡಿದೆ.

ಜಿಲ್ಲೆಯಲ್ಲಿ ಕೆಲ ವರ್ಷಗಳಿಂದ ಹವಾಮಾನ ವೈಪರೀತ್ಯ ಕಂಡುಬರುತ್ತಿದೆ. ೨೦೨೩ರ ಮಾನ್ಸೂನ್‌ನಲ್ಲಿ ಬರ ಪರಿಸ್ಥಿತಿ ಇದ್ದರೆ, ೨೦೨೪ರಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿತ್ತು. ಈ ಬಾರಿ ಮೇ ತಿಂಗಳಲ್ಲಿಯೇ ಹೆಚ್ಚು ಮಳೆ ಸುರಿದಿದ್ದು, ಜೂನ್ ತಿಂಗ ಳಲ್ಲಿಯೂ ವಾಡಿಕೆಗಿಂತ ಹೆಚ್ಚು ಮಳೆ ದಾಖಲಾಗಿದೆ. ಹೀಗಾಗಿ ರೈತರು ತಡವಾಗಿ ಬಿತ್ತನೆ ಆರಂಭಿಸುತ್ತಿದ್ದು, ಮುಂದಿನ ದಿನಗಳಲ್ಲಿಯೂ ಅತಿವೃಷ್ಟಿಯಿಂದ ನಷ್ಟ ಅನುಭವಿಸುವ ಆತಂಕದಲ್ಲಿ ದ್ದಾರೆ. ಇಂತಹ ಸಂದರ್ಭದಲ್ಲಿ ಬೆಳೆವಿಮೆ ಮಾಡಿಸುವುದು ಸೂಕ್ತ ಎಂಬುದು ಕೃಷಿ ಇಲಾಖೆ ಅಧಿಕಾರಿಗಳ ಸಲಹೆಯಾಗಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಮುಂತಾದ ಪ್ರಾಕೃತಿಕ ವಿಕೋಪ ಹಾಗೂ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿದೆ.

ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಕೂಡ ಪರಿಗಣಿಸಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಗೆ ಸಂಬಂಽಸಿದಂತೆ, ಓರಿಯಂಟಲ್ ಜನರಲ್ ಇನ್ಶುರೆನ್ಸ್ ಕಂಪೆನಿಯನ್ನು ಬೆಳೆ ವಿಮೆ ಕಾರ್ಯಕ್ಕೆ ಆಯ್ಕೆ ಮಾಡಲಾಗಿದೆ. ವಿಮಾ ಅರ್ಜಿಗಳು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಲಭ್ಯವಿದ್ದು, ಈ ಯೋಜನೆಯಡಿ ಅರ್ಜಿಯನ್ನು ಬ್ಯಾಂಕ್‌ಗಳಲ್ಲಿ ಸಲ್ಲಿಸಿ ನೋಂದಾಯಿಸಿಕೊಳ್ಳ ಬಹುದಾಗಿದೆ.

ಫಸಲ್ ವಿಮಾ ಯೋಜನೆಯಡಿ ಕೊಡಗು ಜಿಲ್ಲೆಯಲ್ಲಿ ಭತ್ತ ಮತ್ತು ಮುಸುಕಿನಜೋಳವನ್ನು ಸೇರ್ಪಡೆಮಾಡಲಾಗಿದೆ. ನೀರಾವರಿ ಭೂಮಿಯ ಭತ್ತವಾಗಿದ್ದರೆ ವಿಮಾ ಮೊತ್ತ ಪ್ರತಿ ಹೆಕ್ಟೇರ್‌ಗೆ ೯೩,೨೫೦ ರೂ. ದೊರೆಯಲಿದ್ದು, ಇದಕ್ಕೆ ಕಂತು ಹೆಕ್ಟೇರ್‌ಗೆ ೧,೮೬೫ ರೂ., ಒಂದು ಎಕರೆಗೆ ೭೪೬ ರೂ. ಪಾವತಿಸಬೇಕಿದೆ. ಮಳೆಯಾಶ್ರಿತದಲ್ಲಿ ಭತ್ತ ಬೆಳೆದಿದ್ದರೆ ಪ್ರತಿ ಹೆಕ್ಟೇರ್‌ಗೆ ೬೩,೭೫೦ ರೂ. ವಿಮಾ ಮೊತ್ತವಿದ್ದು, ೧,೨೭೫ ರೂ. ವಿಮಾ ಕಂತು ಇದೆ. ಒಂದು ಎಕರೆಗೆ ೫೧೦ ರೂ. ಪಾವತಿಸಬೇಕಿದೆ. ಈ ಎರಡಕ್ಕೂ ಆಗಸ್ಟ್ ೧೬ ಕೊನೆಯ ದಿನವಾಗಿದೆ. ಮಳೆಯಾಶ್ರಿತ ಭೂಮಿಯಲ್ಲಿ ಮುಸುಕಿನಜೋಳಕ್ಕೆ ಪ್ರತಿ ಹೆಕ್ಟೇರ್‌ಗೆ ೫೬,೫೦೦ ರೂ. ವಿಮಾ ಮೊತ್ತವಿದ್ದು, ೧,೧೩೦ರೂ. ವಿಮಾ ಕಂತು ಇದೆ. ಒಂದು ಎಕರೆಗೆ ೪೫೨ ರೂ. ವಿಮಾ ಕಂತು ಪಾವತಿಸಬೇಕಿದೆ. ನೋಂದಣಿಗೆ ಜು.೩೧ ಕೊನೆಯ ದಿನವಾಗಿದೆ.

ವರ್ಷದಿಂದ ವರ್ಷಕ್ಕೆ ಭತ್ತ ಬೆಳೆಯುವವರ ಸಂಖ್ಯೆ ಕೊಡಗಿನಲ್ಲಿ ಇಳಿಕೆ ಕಾಣುತ್ತಿದ್ದರೂ, ಈಗ ಜಿಲ್ಲೆಯಲ್ಲಿ ಅಂದಾಜು ೧೫ ಸಾವಿರಕ್ಕೂ ಅಧಿಕ ರೈತರಿದ್ದು, ಭತ್ತ ಹಾಗೂ ಮುಸುಕಿನ ಜೋಳ ಬೆಳೆಯುತ್ತಿದ್ದಾರೆ. ಇಷ್ಟು ಜನರ ಪೈಕಿ ಕಳೆದ ವರ್ಷ ಫಸಲ್ ವಿಮಾ ಯೋಜನೆಯಡಿ ನೋಂದಣಿಯಾದವರು ಕೇವಲ ೬೨೩ ಮಾತ್ರ. ಆದರೆ, ಇವರಲ್ಲಿ ಅರ್ಧದಷ್ಟು ಮಂದಿ ಅಂದರೆ ೩೨೩ ಮಂದಿ ವಿಮೆ ಹಣ ಪಡೆದುಕೊಂಡಿದ್ದಾರೆ. ಬಿತ್ತನೆ, ನಾಟಿವೈಫಲ್ಯ, ಮಧ್ಯಂತರ ಬೆಳೆ ನಷ್ಟ, ಇಳುವರಿ ಕೊರತೆ, ಸ್ಥಳೀಯ ವಿಪತ್ತುಗಳು, ನೈಸರ್ಗಿಕ ವಿಕೋಪಗಳು, ಪ್ರತಿಕೂಲ ಹವಾಮಾನದಿಂದ ಇಳುವರಿ ನಷ್ಟ ಹಾಗೂ ಕಟಾವು ನಂತರದ ನಷ್ಟಗಳನ್ನೂ ಪರಿಗಣಿಸಿ ವಿಮಾ ಪರಿಹಾರ ದೊರಕುತ್ತದೆ.

ನೋಂದಣಿ ಹೇಗೆ?

” ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾಯೋಜನೆಯಡಿ ರೈತರು ಅರ್ಜಿಯೊಂದಿಗೆ ಪಹಣಿ, ಬ್ಯಾಂಕ್ ಪಾಸ್ ಪುಸ್ತಕ ಮತ್ತು ಆಧಾರ್ ಸಂಖ್ಯೆಯನ್ನು ನೀಡಿ ನೋಂದಾಯಿಸಿಕೊಳ್ಳಬೇಕು. ಯೋಜನೆಯ ಮಾಹಿತಿಯನ್ನು ಸಂರಕ್ಷಣೆ ತಂತ್ರಾಂಶದಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಹೋಬಳಿಯ ರೈತ ಸಂಪರ್ಕ ಕೇಂದ್ರ, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದಾಗಿದೆ.”

” ಜಿಲ್ಲೆಯಲ್ಲಿ ಕಳೆದ ವರ್ಷ ಹೆಚ್ಚು ರೈತರು ವಿಮಾ ಯೋಜನೆಗೆ ನೋಂದಣಿ ಮಾಡಿಸಿಕೊಂಡಿದೆ. ಈ ಬಾರಿ ಪ್ರತಿ ಗ್ರಾಪಂ ಮಟ್ಟದಲ್ಲಿ ಕರ ಪತ್ರಗಳ ಮೂಲಕ ಮತ್ತು ರೈತರನ್ನು ನೇರವಾಗಿ ಭೇಟಿಯಾಗಿ ಜಾಗೃತಿ ಮೂಡಿಸಲಾಗುತ್ತಿದೆ. ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ಬೆಳೆ ನಷ್ಟದಿಂದ ಪಾರಾಗಲು ಬೆಳೆವಿಮೆ ಮಾಡಿಸುವುದು ಸೂಕ್ತ.”

-ಡಾ.ಬಿ.ಎಸ್.ಚಂದ್ರಶೇಖರ್, ಜಂಟಿ ನಿರ್ದೇಶಕರು, ಕೃಷಿ ಇಲಾಖೆ

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

2 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

5 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

5 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

6 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

9 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

9 hours ago