Andolana originals

ನೋಂದಣಿ ಶುಲ್ಕ ಹೆಚ್ಚಳ; ಆಸ್ತಿ ಖರೀದಿಗೆ ಹಿನ್ನಡೆ

ಎಚ್.ಎಸ್.ದಿನೇಶ್ ಕುಮಾರ್

ರಿಯಲ್ ಎಸ್ಟೇಟ್ ಉದ್ಯಮಕ್ಕೂ ಬೀಳಲಿದೆ ಭಾರೀ ಹೊಡೆತ

ಸ್ವಾಧೀನ, ಭೋಗ್ಯ ಪತ್ರ, ಸ್ಥಿರಾಸ್ತಿ ಶುದ್ಧ ಕ್ರಯ ಪತ್ರಕ್ಕೂ ಈ ಶುಲ್ಕ ಅನ್ವಯ

ಮೈಸೂರು: ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಆಘಾತ ನೀಡಿದೆ. ಆಸ್ತಿ ನೋಂದಣಿ ಶುಲ್ಕವನ್ನು ದುಪ್ಪಟ್ಟು ಮಾಡಿದ್ದು, ಸೋಮವಾರದಿಂದಲೇ ಪರಿಷ್ಕತ ಆಸ್ತಿ ನೋಂದಣಿ ಶುಲ್ಕ ಜಾರಿಗೆ ಬರಲಿದೆ.

ಪೆಟ್ರೋಲ್, ಹಾಲು, ಬಸ್ ಪ್ರಯಾಣ ದರ, ವಿದ್ಯುತ್, ನೀರು ದರ ಹೆಚ್ಚಳದ ಬೆನ್ನಲ್ಲೇ ಇದೀಗ ಆಸ್ತಿಗಳ ನೋಂದಣಿ ಶುಲ್ಕವನ್ನು ಹೆಚ್ಚಳ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಆ ಮೂಲಕ ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಇದೀಗ ಆಸ್ತಿ ನೋಂದಣಿ ಶುಲ್ಕ ಶೇ.೧ರಿಂದ ಶೇ.೨ರಷ್ಟು ಏರಿಕೆ ಮಾಡಲಾಗಿದ್ದು, ಇದರಿಂದಾಗಿ ಬಡವರು ಹಾಗೂ ಮಧ್ಯಮ ವರ್ಗದವರು ಇನ್ನು ಮುಂದೆ ಆಸ್ತಿ ಖರೀದಿಸುವ ಸಂಬಂಧ ಒಮ್ಮೆ ಯೋಚಿಸುವಂತಾಗಿದೆ.

ರಾಜ್ಯದಲ್ಲಿ ಈವರೆಗೂ ನಿವೇಶನ, ಭೂಮಿ, ಫ್ಲ್ಯಾಟ್, ಮನೆ ಸೇರಿದಂತೆ ಸ್ಥಿರಾಸ್ತಿ ಖರೀದಿ ವೇಳೆ ಶೇ.೧ರಷ್ಟು ನೋಂದಣಿ ಶುಲ್ಕ ಹಾಗೂ ಶೇ.೫.೬ರಷ್ಟು ಮುದ್ರಾಂಕ ಶುಲ್ಕ ಸೇರಿ ಶೇ.೬.೬ ರಷ್ಟು ಶುಲ್ಕ ಇತ್ತು. ಆದರೆ ಈಗ ಏರಿಕೆಯಿಂದ ಒಟ್ಟು ಶೇ.೭.೬ರಷ್ಟು ಶುಲ್ಕ ಪಾವತಿಸಬೇಕಿದೆ. ಸ್ವಾಧಿನ, ಭೋಗ್ಯ ಪತ್ರ, ಸ್ಥಿರಾಸ್ತಿ ಶುದ್ಧ ಕ್ರಯ ಪತ್ರ ಸೇರಿದಂತೆ ವಿವಿಧ ಆಸ್ತಿ ಖರೀದಿ ನೋಂದಣಿಗೆ ಈ ಶುಲ್ಕ ಅನ್ವಯವಾಗಲಿದೆ.

ಸರ್ಕಾರದ ಈ ನಿರ್ಧಾರದಿಂದಾಗಿ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಹೊಡೆತ ಬಿದ್ದಂತಾಗಿದೆ. ನಗರದಾದ್ಯಂತ ಭೂಮಿಯ ಬೆಲೆ ಗಗನಕ್ಕೇರಿದೆ. ಬಡವರು ಹಾಗೂ ಮಧ್ಯಮ ವರ್ಗದವರು ಭೂಮಿ ಖರೀದಿಯ ಬಗ್ಗೆ ಚಿಂತಿಸಲೂ ಆಗದಷ್ಟು ದರಗಳು ಹೆಚ್ಚಳವಾಗಿವೆ.

ನಗರದ ಹೊರವಲಯಗಳಲ್ಲಿ ಸ್ವಲ್ಪಮಟ್ಟಿಗೆ ಭೂಮಿ ಬೆಲೆ ಕಡಿಮೆಯಿದೆ. ಭೂಮಿಯನ್ನು ಖರೀದಿಸುವವರು ಇದೀಗ ನೋಂದಣಿ ಶುಲ್ಕಕ್ಕೂ ಹೆಚ್ಚು ಹಣ ಹೊಂದಿಸುವ ಅನಿವಾರ್ಯತೆಗೆ ಸಿಲುಕಲಿದ್ದಾರೆ. ಬಡವರಿಗೆ ಅನುಕೂಲ ಮಾಡಿಕೊಡಬೇಕಾದ ಸರ್ಕಾರ, ಇದೀಗ ಶುಲ್ಕ ಹೆಚ್ಚಳದ ಮೂಲಕ ಬಡವರನ್ನು ಸಂಕಷ್ಟಕ್ಕೆ ದೂಡಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಶುಲ್ಕ ಹೆಚ್ಚಳದ ಕಾರಣ ರಿಯಲ್ ಎಸ್ಟೇಟ್ ಉದ್ಯಮಕ್ಕೂ ಹೊಡೆತ ಬೀಳುವಂತಾಗಿದೆ. ಮೈಸೂರು ನಗರವನ್ನು ಕೇಂದ್ರೀಕರಿಸಿದಲ್ಲಿ ಸುಮಾರು ೨೦ ಕಿ.ಮೀ. ವ್ಯಾಪ್ತಿಯಲ್ಲಿ ಖಾಸಗಿ ಬಡಾವಣೆಗಳು ನಿರ್ಮಾಣವಾಗಿವೆ. ಸಾವಿರಾರು ನಿವೇಶನಗಳು ಮಾರಾಟಕ್ಕೆ ಸಿದ್ಧವಾಗಿವೆ. ಇದೀಗ ಶುಲ್ಕ ಹೆಚ್ಚಳದಿಂದಾಗಿ ನಿವೇಶನ ಮಾರಾಟಕ್ಕೆ ಹಿನ್ನಡೆ ಉಂಟಾಗಲಿದೆ ಎನ್ನುತ್ತಾರೆ ರಿಯಲ್ ಎಸ್ಟೇಟ್ ಉದ್ಯಮಿಗಳು.

” ನಗರದಲ್ಲಿನ ಗೃಹ ನಿರ್ಮಾಣ ಸಹಕಾರ ಸಂಘಗಳಲ್ಲಿ, ಖಾಸಗಿ ಡೆವಲಪರ್‌ಗಳ ಬಳಿ ನಿವೇಶನಕ್ಕಾಗಿ ಜನರು ಹಲವಾರು ವರ್ಷಗಳಿಂದ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಮುಡಾ ಹಗರಣದ ನಂತರ ನಿವೇಶನಗಳ ಬಿಡುಗಡೆ ಆಗುತ್ತಿಲ್ಲ. ಖಾತೆ ಮಾಡಿಕೊಡುವುದನ್ನು ನಮೂನೆ ೯ ಮತ್ತು ೧೧ ನೀಡಲು ಆಯಾ ಪಂಚಾಯ್ತಿ ವ್ಯಾಪ್ತಿಗೆ ವಹಿಸಲಾಗಿದೆ. ಅಲ್ಲಿಯೂ ಕೆಲಸಗಳು ವೇಗ ಪಡೆದುಕೊಂಡಿಲ್ಲ. ಇಂತಹ ಸಂದರ್ಭದಲ್ಲಿ ನೋಂದಣಿ ಶುಲ್ಕ ಹೆಚ್ಚಳದ ಅವಶ್ಯಕತೆ ಇರಲಿಲ್ಲ. ಗ್ಯಾರಂಟಿ ಯೋಜನೆಗಳಿ ಗಾಗಿ ಸರ್ಕಾರ ಬೆಲೆಗಳನ್ನು ಹೆಚ್ಚಳ ಮಾಡುತ್ತಿದೆ.”

-ಎಸ್.ಎಂ.ಶಿವಪ್ರಕಾಶ್, ಎಸ್‌ಎಂಪಿ ಡೆವಲಪರ‍್ಸ್

” ಮೈಸೂರಿನಲ್ಲಿ ನಿವೇಶನಗಳ ಬೆಲೆ ಗಗನಕ್ಕೇರಿದೆ. ಬಡವರು ನಿವೇಶನ ಖರೀದಿ ಮಾಡಲು ಸಾಧ್ಯವೇ ಎನ್ನುವ ಮಟ್ಟಿಗೆ ಬೆಲೆಗಳು ಹೆಚ್ಚಳವಾಗಿದೆ. ಇಂತಹ ಸಂದರ್ಭದಲ್ಲಿ ನೋಂದಣಿ ಶುಲ್ಕ ಹೆಚ್ಚಳ ಮಾಡಿರುವುದು ಸರಿಯಲ್ಲ. ಈಗಾಗಲೇ ಮುದ್ರಾಂಕ ಮತ್ತು ನೋಂದಣಿ ಶುಲ್ಕ ಆಂಧ್ರ ಮತ್ತು ತೆಲಂಗಾಣಕ್ಕಿಂತ ನಮ್ಮ ರಾಜ್ಯದಲ್ಲಿ ಹೆಚ್ಚಿದೆ. ಹೀಗಾದಲ್ಲಿ ಜನರು ನಿವೇಶನ ಖರೀದಿಸುವುದು ಕಷ್ಟಕರವಾಗುತ್ತದೆ. ಯಾವುದೇ ಸರ್ಕಾರ ಬಡವರ ಪರ ನಿರ್ಧಾರ ಕೈಗೊಳ್ಳಬೇಕು. ಉಳ್ಳವರು ಈ ಬಗ್ಗೆ ಚಿಂತಿಸುವುದಿಲ್ಲ. ಸರ್ಕಾರ ಈ ಬಗ್ಗೆ ಆಲೋಚಿಸಬೇಕು.”

-ಎಂ.ಎಸ್.ಧನಂಜಯ,  ಪತ್ರ ಬರಹಗಾರರ ಸಂಘದ ರಾಜ್ಯ ಉಪಾಧ್ಯಕ್ಷ 

ಆಂದೋಲನ ಡೆಸ್ಕ್

Recent Posts

TESLA | ಶೀಘ್ರದಲ್ಲೇ ಬೆಂಗಳೂರಿಗೆ ಟೆಸ್ಲಾ ಶೋ ರೂಂ!

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಶೋ ರೂಂ ತೆರೆಯುದಾಗಿ ವಿದ್ಯುತ್ ಚಾಲಿತ ಕಾರು ತಯಾರಿಕಾ ಕಂಪನಿ ʼಟೆಸ್ಲಾʼ…

8 hours ago

ಚಲನಚಿತ್ರ ಪ್ರಮಾಣೀಕರಣದಲ್ಲಿ ಪಾರದರ್ಶಕತೆ ಇರಲಿ : ನಟ ಕಮಲ್ ಹಾಸನ್ ಸಲಹೆ

ಚೆನ್ನೈ : ತಮಿಳ್ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ಹಾಗೂ ನಟ ವಿಜಯ್ ಅಭಿನಯದ ಜನ ನಾಯಗನ್ ಚಿತ್ರಕ್ಕೆ ಸಂಬಂಧಿಸಿದ…

8 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಸ್ಚಚ್ಛತಾ ಅಭಿಯಾನ : 410 ಕೆ.ಜಿ ಕಸ ಸಂಗ್ರಹ

ಮೈಸೂರು : ಸ್ವಚ್ಛ ನಗರಿ ಮೈಸೂರಿನ ರಮಣೀಯ ಸ್ಥಳವಾದ ಕುಕ್ಕರಹಳ್ಳಿ ಕೆರೆಯ ಸ್ವಚ್ಛತೆಗಾಗಿ, ಸ್ವಚ್ಛ ಸರ್ವೇಕ್ಷಣ ಅಭಿಯಾನದ ಭಾಗವಾಗಿ ಮೈಸೂರು…

9 hours ago

ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ : ಎಚ್‌ಡಿಕೆ ಲೇವಡಿ

ಬೆಂಗಳೂರು : ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಅಧಿಕಾರವಧಿಯಲ್ಲಿ…

9 hours ago

SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ

ಬೆಂಗಳೂರು : ವಿದ್ಯಾರ್ಥಿ ಜೀವನದ ಅತಿ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ…

10 hours ago

ಸ್ಪಾಮ್‌ ಕರೆಗಳ ಕಾಟವೇ? TRAI DND ಅಥವಾ 1909ಗೆ ಕರೆಮಾಡಿ

ಮೈಸೂರು : ಸ್ಪಾಮ್ ಕರೆಗಳ ಮೂಲಕ ಡಿಜಿಟಲ್ ಅರೆಸ್ಟ್ ಹಾಗೂ ಡಿಜಿಟಲ್ ವಂಚನೆ ಮಾಡುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಫೋನಿನ ಕಾಲಿಂಗ್…

10 hours ago