ಮೈಸೂರಿನ ರಾಜ ಕಾಲುವೆಗಳು ಹಾಗೂ ಚರಂಡಿಗಳಲ್ಲಿ ಹೂಳು ಸಂಗ್ರಹವಾಗಿದ್ದು, ಜೋರು ಮಳೆ ಸುರಿದರೆ ಚರಂಡಿ ನೀರೆಲ್ಲಾ ರಸ್ತೆಯ ಮೇಲೆ ಹರಿದು ದುರ್ವಾಸನೆ ಬೀರುತ್ತಿದೆ. ಮೈಸೂರು ನಗರ ಪಾಲಿಕೆಯವರು ಮಳೆಗಾಲಕ್ಕೆ ಮುನ್ನವೇ ರಾಜಕಾಲುವೆ ಹಾಗೂ ಚರಂಡಿಗಳ ಹೂಳು ತೆರವುಗೊಳಿಸದಿದ್ದರೆ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತದೆ. ಮೈಸೂರು ಮಹಾ ನಗರ ಪಾಲಿಕೆಯವರು ಕೂಡಲೇ ಚರಂಡಿ ಹಾಗೂ ರಾಜಕಾಲುವೆಗಳಲ್ಲಿ ಸಂಗ್ರಹವಾಗಿರುವ ಕಸ ಹಾಗೂ ಹೂಳನ್ನು ತೆರವುಗೊಳಿಸಬೇಕು ಹಾಗೂ ನಗರ ವ್ಯಾಪ್ತಿಯ ಎಲ್ಲ ರಾಜಕಾಲುವೆಗಳಿಗೂ ತಂತಿ ಬೇಲಿಯನ್ನು ಅಳವಡಿಸುವ ಮೂಲಕ ರಾಜಕಾಲುವೆಗೆ ಕಸ ಎಸೆಯುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕಾಗಿದೆ.
-ನಿಂಗರಾಜ್, ಮೈಸೂರು





