Mysore
20
overcast clouds

Social Media

ಶನಿವಾರ, 03 ಜನವರಿ 2026
Light
Dark

‘ಬಸ್ ನಿಲ್ದಾಣದ ಶೌಚಾಲಯವನ್ನು ಬೇಗ ದುರಸ್ತಿಗೊಳಿಸಿ’

ಮಹಾದೇಶ್ ಎಂ.ಗೌಡ

ಹನೂರು: ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯದ ದುರಸ್ತಿ ಕಾರ್ಯವನ್ನು ಶೀಘ್ರವೇ ಪೂರ್ಣಗೊಳಿಸಿ ಸೇವೆಗೆ ಸಮರ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪಟ್ಟಣಕ್ಕೆ ವಿವಿಧ ಗ್ರಾಮಗಳಿಂದ ಆಗಮಿಸುವ ಸಾರ್ವಜನಿಕರು ಹಾಗೂ ಇನ್ನಿತರ ಕೆಲಸ ಕಾರ್ಯಗಳಿಗೆ ಬರುವ ಕಾರ್ಮಿಕರಿಗಾಗಿ ೨೦೦೪ರಲ್ಲಿ ಶಾಸಕರಾಗಿದ್ದ ಪರಿಮಳ ನಾಗಪ್ಪ ಈ ಶೌಚಾಲಯವನ್ನು ನಿರ್ಮಾಣ ಮಾಡಿಸಿದ್ದರು. ಈ ಶೌಚಾಲಯ ನಿರ್ಮಿಸಿ ೨ ವರ್ಷಗಳಾಗಿರುವುದರಿಂದ ಮೂತ್ರ ವಿಸರ್ಜನೆಯ ತಡೆಗೋಡೆಗಳು ಶಿಥಿಲವಾಗಿದ್ದವು. ಶೌಚಾಲಯದ ಬಾಗಿಲುಗಳು, ನೀರಿನ ಪೈಪ್‌ಲೈನ್, ನಲ್ಲಿಗಳು ಕಿತ್ತು ಬಂದು ಸಾರ್ವಜನಿಕರಿಗೆ ತೊಂದರೆಯಾಗಿತ್ತು. ಈ ಸಂಬಂಧ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು.

ನಂತರ ಎಚ್ಚೆತ್ತ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಈ ಶೌಚಾಲಯವನ್ನು ೫ ಲಕ್ಷ ರೂ.ವೆಚ್ಚದಲ್ಲಿ ದುರಸ್ತಿಗೊಳಿಸಲು ೨ ತಿಂಗಳ ಹಿಂದೆ ಟೆಂಡರ್ ಕರೆದು ಕಾಮಗಾರಿಗೆ ಚಾಲನೆ ನೀಡಿದ್ದರು. ಆದರೆ, ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ. ಇದರಿಂದ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಪಟ್ಟಣಕ್ಕೆ ಬರುವ ಸಾರ್ವಜನಿಕರು, ಅಂಗಡಿ ಮಾಲೀಕರು, ಕೂಲಿ ಕಾರ್ಮಿಕರು, ಬಸ್ ಚಾಲಕರು, ನಿರ್ವಾಹಕರು ಹಾಗೂ ಪ್ರಯಾಣಿಕರಿಗೆ ತೊಂದರೆಯಾಗಿದೆ. ಬಾಕಿ ಇರುವ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ ಶೌಚಾಲಯವನ್ನು ಬಳಕೆಗೆ ನೀಡುವಂತೆ ಮನವಿ ವಾಡಿದ್ದಾರೆ.

ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತರು, ಜಾತ್ರಾ ಮಹೋತ್ಸವ ಹಾಗೂ ಹಬ್ಬ ಹರಿದಿನಗಳಲ್ಲಿ ಲಕ್ಷಾಂತರ ಜನರು ಭೇಟಿ ನೀಡುತ್ತಾರೆ. ಪಟ್ಟಣದ ಮಾರ್ಗವಾಗಿ ತೆರಳುವ ವಾಹನ ಸವಾರರು ಶೌಚಾಲಯಕ್ಕೆ ಹೋಗಲು ಪರದಾಡ ಬೇಕಿದೆ. ಸಂಬಂಧಪಟ್ಟ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಽಗಳು ಶೌಚಾಲಯವನ್ನು ಶೀಘ್ರ ದುರಸ್ತಿಪಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಚಿಕ್ಕದಾಗಿದ್ದ ಶೌಚಾಲಯದ ಮಲದ ಗುಂಡಿಯನ್ನು ಈಗಾಗಲೇ ದೊಡ್ಡದಾಗಿ ನಿರ್ಮಿಸಲಾಗಿದೆ. ಇನ್ನು ಕೇವಲ ೨ ದಿನಗಳ ಕಾಮಗಾರಿ ಮಾತ್ರ ಬಾಕಿ ಇದೆ. ಇನ್ನು ಒಂದು ವಾರದೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗು ವುದು ಎಂದು ಗುತ್ತಿಗೆದಾರ ಷಣ್ಮುಗ ಪತ್ರಿಕೆಗೆ ತಿಳಿಸಿದ್ದಾರೆ

” ಖಾಸಗಿ ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯ ಮುಚ್ಚಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಗುತ್ತಿಗೆದಾರನಿಗೆ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಈಗಾಗಲೇ ಸೂಚಿಸಲಾಗಿದೆ.”

-ಮಹೇಶ್‌ಕುಮಾರ್, ಮುಖ್ಯಾಧಿಕಾರಿ, ಹನೂರು ಪಪಂ

” ಹನೂರು ತಾಲ್ಲೂಕು ಕೇಂದ್ರವಾಗಿರುವುದರಿಂದ ಪ್ರತಿನಿತ್ಯ ವಿವಿಧ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಿದ್ದಾರೆ. ಶೌಚಾಲಯ ಮುಚ್ಚಿರುವುದರಿಂದ ಮೂತ್ರ ವಿಸರ್ಜನೆಗೆ ತೊಂದರೆಯಾಗಿದೆ. ಇನ್ನು ಮಹಿಳೆಯರ ಪಾಡಂತೂ ಹೇಳತೀರದಾಗಿದೆ. ಸಂಬಂಧಪಟ್ಟವರು ಬೇಗ ಕ್ರಮ ವಹಿಸಬೇಕು.”

-ನಂಜಪ್ಪ , ಎಪಿಎಂಸಿ ಮಾಜಿ ಸದಸ್ಯ

Tags:
error: Content is protected !!