ಓದುಗರ ಪತ್ರ
ಮೈಸೂರಿನ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಜಿಲ್ಲಾ ಹಾಪ್‌ಕಾಪ್ಸ್ನಿಂದ ಅರಮನೆ ಕಡೆಗೆ ತೆರಳುವ ಪಾದಚಾರಿ ರಸ್ತೆಯಲ್ಲಿ ಚಪ್ಪಡಿ ಕಲ್ಲುಗಳು ಕಿತ್ತುಬಂದು ಬಾಯ್ದೆರೆದು ಕೊಂಡಿವೆ. ಈ ಮಾರ್ಗದಲ್ಲಿ ದಿನನಿತ್ಯ ಸಾವಿರಾರು ಜನರು ಓಡಾಡುತ್ತಾರೆ. ರಾತ್ರಿಯ ವೇಳೆಯಂತೂ ಚಪ್ಪಡಿ ಕಲ್ಲುಗಳು ಮೇಲೆದ್ದು ಬಂದಿರುವುದು ಕಾಣಿಸದೇ ಆಯತಪ್ಪಿ ಬೀಳುವ ಸಾಧ್ಯತೆ ಹೆಚ್ಚಾಗಿರುತ್ತದೆ. ದಸರಾಕ್ಕೆ ಕ್ಷಣಗಣನೆ ಶುರುವಾಗಿದೆ.
ಜನಪ್ರತಿನಿಧಿಗಳಿಗೆ ಇದರ ಅರಿವೇ ಇಲ್ಲ ಎನ್ನುವಂತಾಗಿದೆ. ದಸರಾ ಜಂಬೂ ಸವಾರಿ ಈ ಮಾರ್ಗದಲ್ಲೇ ಹಾದು ಹೋಗಲಿದ್ದು, ಇಲ್ಲಿ ಸಾರ್ವಜನಿಕರು ಕುಳಿತುಕೊಳ್ಳಲು ಆಸನ ಗಳನ್ನು ಅಳವಡಿಸಲಾಗುತ್ತದೆ. ಆದ್ದರಿಂದ ಜನಪ್ರತಿನಿಧಿಗಳು ಚಪ್ಪಡಿ ಕಲ್ಲುಗಳನ್ನು ಆದಷ್ಟು ಬೇಗ ಸರಿಪಡಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಜಿ.ಪಿ.ಹರೀಶ್, ವಿ.ವಿ.ಮೊಹಲ್ಲಾ, ಮೈಸೂರು
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…