ಓದುಗರ ಪತ್ರ
ಕಳೆದ ವರ್ಷದಿಂದ ರಾಜ್ಯ ಸರ್ಕಾರವು ಮಧ್ಯಾಹ್ನ ಉಪಾಹಾರ ಯೋಜನೆಯಡಿ ಅಜೀಂ ಪ್ರೇಂ ಜಿ ಫೌಂಡೇಶನ್ ಸಹಭಾಗಿತ್ವದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ೧ ರಿಂದ ೧೦ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರದ ಆರು ದಿನಗಳೂ ಮೊಟ್ಟೆ ನೀಡುತ್ತಾ ಬಂದಿರುವುದು ಶ್ಲಾಘನೀಯ.
ಈಗ ಮಧ್ಯಾಹ್ನದ ಬಿಸಿಯೂಟದ ಜತೆಗೆ ಮೊಟ್ಟೆ ನೀಡುತ್ತಿರುವುದರಿಂದ ಮಕ್ಕಳಿಗೆ ಪೌಷ್ಟಿಕಾಂಶ ದೊರೆಯುತ್ತಿದೆ. ಪ್ರಸ್ತುತ ಮೊಟ್ಟೆ ದರ ಪರಿಷ್ಕರಣೆ ಅಗತ್ಯವಾಗಿದೆ. ಏಕೆಂದರೆ ಒಂದು ಮೊಟ್ಟೆಗೆ ಆರು ರೂಪಾಯಿಯಂತೆ ಶಿಕ್ಷಕರಿಗೆ ಸರ್ಕಾರ ಹಣ ನೀಡುತ್ತಿದೆ. ಇದರಲ್ಲಿ ಮೊಟ್ಟೆ ಖರೀದಿಸಲು ಪ್ರತಿ ಮೊಟ್ಟೆಗೆ ಐದು ರೂಪಾಯಿ, ಸಾಗಾಣಿಕೆ ವೆಚ್ಚ ೨೦ ಪೈಸೆ, ಮೊಟ್ಟೆ ಸುಲಿಯುವವರಿಗೆ ೩೦ ಪೈಸೆ, ಮೊಟ್ಟೆ ಬೇಯಿಸಲು ೫೦ ಪೈಸೆ ಗ್ಯಾಸ್ ವೆಚ್ಚ ಈ ರೀತಿ ಹಂಚಿಕೆ ಮಾಡಲಾಗಿದ್ದು, ಅಂತಿಮವಾಗಿ ಪ್ರತಿ ಮೊಟ್ಟೆಗೆ ಶಿಕ್ಷಕರಿಗೆ ೫ ರೂ . ೨೦ ಪೈಸೆ ನೀಡಲಾಗುತ್ತಿದೆ. ಪ್ರಸ್ತುತ ಪ್ರತಿ ಮೊಟ್ಟೆ ದರ ಮಾರುಕಟ್ಟೆಯಲ್ಲಿ ೭ ರೂ. ಇದ್ದು ಹೆಚ್ಚಿಗೆ ಹಣವನ್ನು ಶಿಕ್ಷಕರು ಪ್ರತಿನಿತ್ಯ ಭರಿಸುತ್ತಿದ್ದಾರೆ. ಹೀಗಾಗಿ ಸರ್ಕಾರ ಮೊಟ್ಟೆ ದರವನ್ನು ಪರಿಷ್ಕರಣೆ ಮಾಡಿ ಶಿಕ್ಷಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲಿ.
–ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…