ಹನೂರು: ಟೆಂಡರ್ ಆಗುವ ಮುನ್ನವೇ ರಸ್ತೆ ಅಭಿವೃದ್ಧಿಗೆ ಶಾಸಕ ಎಂ.ಆರ್.ಮಂಜುನಾಥ್‌ರವರು ಭೂಮಿಪೂಜೆ ನೆರವೇರಿಸಿರುವುದು ಚರ್ಚೆಗೆ ಗ್ರಾಸವಾಗಿರುವುದಲ್ಲದೆ, ರಸ್ತೆ ಅಭಿವೃದ್ಧಿಯಾಗದೆ ನಿತ್ಯ ವಾಹನ ಸವಾರರು ತೊಂದರೆ ಎದುರಿಸುತ್ತಿದ್ದಾರೆ.
ಹನೂರು ಮಾರ್ಗವಾಗಿ ಅಜ್ಜೀಪುರ, ರಾಮಾಪುರ, ನಾಲ್‌ರೋಡ್, ಗರಿಕೆಕಂಡಿ ಮೂಲಕ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಹದಗೆಟ್ಟು ವರ್ಷಗಳೇ ಕಳೆದಿದ್ದರೂ ಜನಪ್ರತಿನಿಽಗಳು, ಅಽಕಾರಿಗಳು ತಲೆಕೆಡಿಸಿಕೊಂಡಿರಲಿಲ್ಲ. ಕಳೆದ ಅವಧಿಯಲ್ಲಿ ಶಾಸಕರಾಗಿದ್ದ ಆರ್. ನರೇಂದ್ರ ಅವರು ಈ ರಸ್ತೆಗೆ ಅನುದಾನ ನೀಡುವಂತೆ ಹಲವಾರು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿರಲಿಲ್ಲ.
ಕಳೆದ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಜಾ.ದಳ ಅಭ್ಯರ್ಥಿಯಾಗಿದ್ದ ಮಂಜುನಾಥ್‌ರವರು ನಾನು ಶಾಸಕನಾಗಿ ಆಯ್ಕೆಯಾದ ನಂತರ ರಾಮಾಪುರ-ನಾಲ್ ರೋಡ್ ಮಾರ್ಗದ ಈ ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುತ್ತೇವೆ ಎಂದು ತಿಳಿಸಿದ್ದರು. ಅದರಂತೆ ಶಾಸಕನಾಗಿ ಆಯ್ಕೆಯಾದ 10 ತಿಂಗಳ ಬಳಿಕ 9 ಕಿ.ಮೀ. ರಸ್ತೆಯನ್ನು 25 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಭೂಮಿಪೂಜೆ ನೆರವೇರಿಸಿದ್ದರು. ಆದರೆ ಟೆಂಡರ್ ಆಗುವ ಮುನ್ನ ಭೂಮಿಪೂಜೆ ಮಾಡಿರುವುದು ವಿರೋಧ ಪಕ್ಷದವರ ಆಕ್ರೋಶಕ್ಕೆ ಗುರಿಯಾಗಿದೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ನೀತಿ ಸಂಹಿತೆ ಬಂದರೆ ಭೂಮಿಪೂಜೆ ಮಾಡಲು ಆಗದು ಎಂಬ ಉದ್ದೇಶದಿಂದ ಟೆಂಡರ್ ಆಗುವ ಮುನ್ನವೇ ಮಾರ್ಚ್ 11ರಂದು ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ನೆರವೇರಿಸಿದ್ದರು. ಪೂಜೆ ನಡೆಸಿ 3 ತಿಂಗಳು ಕಳೆದರೂ ರಸ್ತೆ ಅಭಿವೃದ್ಧಿ ಪ್ರಾರಂಭವಾಗಿಲ್ಲ. ಟೆಂಡರ್ ಕೂಡಾ ಇನ್ನಷ್ಟೇ ಕರೆಯಬೇಕಾಗಿದ್ದು, ಟೆಂಡರ್‌ನಲ್ಲಿ ಭಾಗವಹಿಸುವ ಪ್ರಕ್ರಿಯೆಗಳು ಮುಗಿದ ನಂತರ ಕಾಮಗಾರಿ ಚಾಲನೆಗೊಳ್ಳಲಿದೆ.
ರಸ್ತೆ ಸಂಚಾರ ಕಷ್ಟ ಕಷ್ಟ: ಹನೂರು ಪಟ್ಟಣದಿಂದ ಅಜ್ಜೀಪುರದವರೆಗೆ ರಸ್ತೆ ಅಲ್ಲಲ್ಲಿ ಹದಗೆಟ್ಟಿದೆ. ಅಂಬಿಕಾಪುರ ಗ್ರಾಮದಿಂದ ರಾಮಾಪುರದವರೆಗೆ ಸಂಪೂರ್ಣ ಹದಗಟ್ಟಿದೆ. ಇನ್ನು ರಾಮಾಪುರದಿಂದ ನಾಲ್ ರೋಡ್ ಗ್ರಾಮದವರೆಗೆ ವಾಹನ ಸವಾರರು ರಸ್ತೆಯಲ್ಲಿರುವ ಗುಂಡಿಗಳಲ್ಲಿ ಇಳಿದು ಹತ್ತಿ ಪ್ರಯಾಸದ ಸಂಚಾರ ಮಾಡಬೇಕಿದೆ.
ಈಗಾಗಲೇ ರಸ್ತೆಯಲ್ಲಿದ್ದ ಜಲ್ಲಿಕಲ್ಲುಗಳೆಲ್ಲ ಮಾಯವಾಗಿದ್ದು, ದೂಳು ಮೇಲೆ ಏಳುತ್ತಿದೆ. ಇದರಿಂದ ದ್ವಿಚಕ್ರ ವಾಹನ ಸವಾರರು ಸಂಚರಿಸಲು ಸಾಧ್ಯವಾಗದಷ್ಟು ತೊಂದರೆಯಾಗಿದೆ. ಕಳೆದ 15 ದಿನಗಳಿಂದ ಸತತ ಮಳೆಯಾಗುತ್ತಿದ್ದು ವಾಹನ ಸವಾರರು ಬಿದ್ದು ಗಾಯಗೊಳ್ಳುತ್ತಿದ್ದಾರೆ. ರಾಮಾಪುರದಿಂದ ನಾಲ್ ರೋಡ್ ಗ್ರಾಮದವಗಿನ ಅರಣ್ಯದ ರಸ್ತೆಯಲ್ಲಿ ಹಲವು ತೀವ್ರ ತಿರುವುಗಳು ಇರುವುದರಿಂದ ಲಾರಿ ಚಾಲಕರ ನಿಯಂತ್ರಣ ತಪ್ಪಿ ಹಲವು ಲಾರಿಗಳು ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ತಮಿಳುನಾಡಿನ ಸತ್ಯಮಂಗಲಂ ಅರಣ್ಯ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ರಿಂದ ಸಂಜೆ 6ವರೆಗೆ ಮಾತ್ರ ಸರಕು ಸಾಗಣೆ ವಾಹನಗಳಿಗೆ ಪ್ರವೇಶವಿದ್ದು ನಂತರ ನಿರ್ಬಂಧ ಹೇರಿರುವುದರಿಂದ ಹೆಚ್ಚು ಭಾರದ ವಾಹನಗಳು ರಾಮಾಪುರ ಮಾರ್ಗವಾಗಿ ನಾಲ್‌ರೋಡ್, ಗರಿಕೆಕಂಡಿ ಮೂಲಕ ತಮಿಳುನಾಡಿಗೆ ಹೋಗುತ್ತವೆ-ಬರುತ್ತವೆ. 40 ಟನ್‌ಗಳಿಗೂ ಹೆಚ್ಚು ಭಾರದ ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತಿರುವುದರಿಂದ ರಸ್ತೆ ಸಂಪೂರ್ಣ ಹದಗೆಡುತ್ತಿದೆ.
ಈ ಹಿಂದೆ 6 ಚಕ್ರದ ವಾಹನಗಳಿಗೆ ಮಾತ್ರ ಪ್ರವೇಶ ಕಲ್ಪಿಸಿ ಉಳಿದ ವಾಹನಗಳಿಗೆ ಜಿಲ್ಲಾಽಕಾರಿಗಳು ನಿಷೇಧ ಹೇರಿ ಆದೇಶ ಹೊರಡಿಸಿದ್ದರು. ಆದರೆ, ಡಿಸಿ ಆದೇಶವನ್ನೇ
ಧಿಕ್ಕರಿಸಿ ಸಂಚರಿಸುತ್ತಿದ್ದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳದೇ ಇರುವುದು ರಸ್ತೆ ಇನ್ನಷ್ಟು ಹಾಳಾಗಲು ಕಾರಣವಾಗಿದೆ ಎನ್ನಲಾಗಿದೆ. ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬಂದಿದ್ದು ಆದಷ್ಟು ಬೇಗ ಟೆಂಡರ್ ಪ್ರಕ್ರಿಯೆ ಮುಗಿಸಿ ಕಾಮಗಾರಿ ಮುಗಿಸಿದರೆ ಅಂತರ ರಾಜ್ಯ ಸಂಚಾರಕ್ಕೆ ಅನುಕೂಲವಾಗಲಿದೆ.
ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿ 3 ತಿಂಗಳು ಕಳೆದರೂ ಕಾಮಗಾರಿ ಪ್ರಾರಂಭವಾಗಿಲ್ಲ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸಬೇಕಾಗುತ್ತದೆ.
– ಇಗ್ನೇಶಿ ಮುತ್ತು, ಗ್ರಾಪಂ ಅಧ್ಯಕ್ಷ, ಮಾರ್ಟಳ್ಳಿ
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…