Andolana originals

ಭೋರ್ಗರೆಯುತ್ತಿರುವ ಚುಂಚನಕಟ್ಟೆ ಜಲಪಾತ

ಮೇ ತಿಂಗಳಲ್ಲೇ ತುಂಬಿ ಹರಿದ ಕಾವೇರಿ; ಜಲಪಾತ ವೀಕ್ಷಣೆಗೆ ಆಗಮಿಸುತ್ತಿರುವ ಜನರು

ಆನಂದ್ ಹೊಸೂರು

ಹೊಸೂರು: ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ರೈತ ಸಮುದಾಯದಲ್ಲಿ ಹರ್ಷ, ಮೇ ತಿಂಗಳಲ್ಲೇ ತುಂಬಿ ಹರಿದ ಕಾವೇರಿ, ಜಲಪಾತದ ರಮಣೀಯ ದೃಶ್ಯ ವೀಕ್ಷಿಸಲು ಬರುತ್ತಿರುವ ಪ್ರವಾಸಿಗರು, ಸೆಲ್ಫಿ ತೆಗೆಯಲು ಮುಗಿಬೀಳುತ್ತಿರುವ ಯುವ ಜನತೆ…

ಇದು ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆಯಲ್ಲಿ ಹರಿಯುವ ಕಾವೇರಿ ನದಿಯಲ್ಲಿ ಕಂಡು ಬರುತ್ತಿರುವ ರಮಣೀಯ ದೃಶ್ಯ.

ಕೊಡಗಿನಲ್ಲಿ ಹಾಗೂ ನದಿಯ ಪಾತ್ರದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕಾವೇರಿ ಮೈದುಂಬಿ ಹರಿಯುತ್ತಿದ್ದು, ಚುಂಚನಕಟ್ಟೆಯಲ್ಲಿ ೨೧ ಸಾವಿರ ಕ್ಯೂಸೆಕ್ಸ್‌ಗೂ ಅಧಿಕ ಪ್ರಮಾಣದ ನೀರು ಹರಿಯುತ್ತಿರುವ ಕಾರಣ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ.

ಕಾವೇರಿ ನದಿಯು ತುಂಬಿ ಹರಿಯುತ್ತಿರುವ ಪರಿಣಾಮ ಈ ನದಿಯ ಕೊನೆಯ ಜಲಪಾತವಾಗಿರುವ ಚುಂಚನಕಟ್ಟೆಯ ಶ್ರೀರಾಮ ದೇವರ ದೇವಸ್ಥಾನದ ಸಮೀಪ ಇರುವ ಧನುಷ್ಕೋಟಿ ಜಲಪಾತ ಭೋರ್ಗರೆದು ಧುಮ್ಮಿಕ್ಕುವ ದೃಶ್ಯ ನೋಡಲು ಸಾವಿರಾರು ಪ್ರವಾಸಿಗರು ಆಗಮಿಸಿ ಜಲಧಾರೆಯ ವೈಭವ ಸವಿಯುತ್ತಿದ್ದಾರೆ.

ಮಳೆ ಇಲ್ಲದೆ ತನ್ನ ಸೊಬಗನ್ನು ಕಳೆದುಕೊಂಡಿದ್ದ ಈ ಜಲಪಾತದಲ್ಲಿ ಈಗ ೪೦ಕ್ಕೂ ಹೆಚ್ಚು ಅಡಿ ಎತ್ತರದಿಂದ ನದಿಯ ನೀರು ಬೀಳುತ್ತಾ, ಹಾಲಿನಂತೆ ಉಕ್ಕಿ ಹರಿಯುತ್ತಿರುವುದನ್ನು ಕಾಣಬಹುದಾಗಿದೆ.

ಕಳೆದ ವರ್ಷ ಜೂನ್ ಅಂತ್ಯದಲ್ಲಿ ತುಂಬಿ ಹರಿದಿದ್ದ ಕಾವೇರಿ ಈ ಬಾರಿ ತಿಂಗಳಿಗೂ ಮುಂಚೆಯೇ ತುಂಬಿ ಹರಿಯುತ್ತಿರುವುದು ಪ್ರಕೃತಿ ಪ್ರಿಯರಲ್ಲಿ ಸಂತಸ ಮೂಡಿಸಿದೆ. ಮೈದುಂಬಿ ಹರಿಯುತ್ತಿರುವ ಕಾವೇರಿ ನದಿಯ ಜಲಪಾತ ವೀಕ್ಷಣೆ ಮಾಡಲು ಹೆಚ್ಚಿನ ರೀತಿಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ. ಇಲ್ಲಿ ಪ್ರತಿಷ್ಠಾಪಿಸಲಾಗಿರುವ ಆಂಜನೇಯ ಸ್ವಾಮಿ ಪ್ರತಿಮೆ ಮುಂದೆ ಸೆಲ್ಫಿ ತೆಗೆದುಕೊಳ್ಳಲು ನಾ ಮುಂದು ತಾ ಮುಂದು ಎಂಬಂತೆ ಮುಗಿಬೀಳುತ್ತಿದ್ದಾರೆ.

ಇದೇ ರೀತಿ ನದಿಯ ಕೂದಲೆಳೆ ದೂರದಲ್ಲಿ ಇರುವ ರಾಮಸಮುದ್ರ ಅಣ್ಣೆಕಟ್ಟೆ ಮತ್ತು ಚುಂಚನಕಟ್ಟೆಯಿಂದ ಸುಮಾರು ೭ ಕಿ.ಮೀ ದೂರದಲ್ಲಿರುವ ಸಕ್ಕರೆ ಗ್ರಾಮದ ಬಳಿಯ ಬಳ್ಳೂರು ಚಾಮರಾಜ ನಾಲೆಯ ಅಣೆಕಟ್ಟೆಯ ಮೇಲೆ ಕಾವೇರಿ ನದಿ ಹರಿಯುವ ದೃಶ್ಯ ನಯನ ಮನೋಹರವಾಗಿದೆ.

” ಜಲಪಾತಗಳು ಮೈದುಂಬಿ ಹರಿಯುವಾಗಲೂ ಜನರನ್ನು ಸೆಳೆಯಲು ಯಾವುದೇ ಪ್ರಚಾರ ಮಾಡದಿರುವುದು ಹಾಗೂ ಪ್ರವಾಸಿಗರಿಗೆ ವಿಚಾರ ತಿಳಿಸದಿರುವುದು ದುರಂತ.”

-ಎಚ್.ಡಿ.ಭಾಸ್ಕರ್, ಹೊಸೂರು ಗ್ರಾಮಸ್ಥರು

” ಚುಂಚನಕಟ್ಟೆ ನಮಗೆ ಬಾಲ್ಯದಿಂದಲೂ ಆಕರ್ಷಣೀಯ ಸ್ಥಳವಾಗಿದ್ದು ಜಲಪಾತ ವೀಕ್ಷಣೆಯೇ ನಮಗೆ ಒಂದು ಅದ್ಭುತ ಅನುಭವ ನೀಡುತ್ತದೆ. ಪ್ರವಾಸಿಗರಿಗೆ ಚುಂಚನಕಟ್ಟೆ ಉತ್ತಮ ಆಯ್ಕೆಯಾಗಲಿದೆ.”

-ರಮೇಶ್, ಪ್ರವಾಸಿ

ಆಂದೋಲನ ಡೆಸ್ಕ್

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

19 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

19 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

20 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

20 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

20 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

20 hours ago