Andolana originals

ದುಷ್ಟರ ನಿಯಂತ್ರಣಕ್ಕೆ ಮತ್ತೆ ರೌಡಿ ಪ್ರತಿಬಂಧಕ ದಳ

ಎಚ್.ಎಸ್.ದಿನೇಶ್ ಕುಮಾರ್

ಮೈಸೂರಿನಲ್ಲಿ ಹೊಸ ತಂಡ ರಚಿಸಿದ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್

ಮೈಸೂರು: ನಗರದಲ್ಲಿ ಹೆಚ್ಚುತ್ತಿರುವ ದುಷ್ಕರ್ಮಿಗಳ ಅಟ್ಟಹಾಸವನ್ನು ಮಟ್ಟ ಹಾಕಲೇಬೇಕು ಎಂಬ ನಿರ್ಧಾರಕ್ಕೆಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಇದೀಗ ರೌಡಿ ಪ್ರತಿಬಂಧಕ ದಳವನ್ನು ಹೊಸದಾಗಿ ರಚಿಸಿದ್ದಾರೆ.

ಕಾರ್ತಿಕ್ ಕೊಲೆ, ವೆಂಕಟೇಶ್ ಹತ್ಯೆ, ಬಾಲಕಿ ಅತ್ಯಾಚಾರ- ಹತ್ಯೆ ಪ್ರಕರಣಗಳು ಹಾಗೂ ನಗರದ ವಿವಿಧ ಬಡಾವಣೆಗಳಲ್ಲಿ ಹೆಚ್ಚುತ್ತಿರುವ ಪುಡಿ ರೌಡಿಗಳ ಕಾಟದಿಂದ ಸಾರ್ವಜನಿಕರನ್ನು ಮುಕ್ತರನ್ನಾಗಿಸುವ ಉದ್ದೇಶದಿಂದ ಆಯುಕ್ತರು ಈ ತೀರ್ಮಾನ ಕೈಗೊಂಡಿದ್ದಾರೆ.

ಪ್ರತಿದಿನ ಒಂದಲ್ಲಾ ಒಂದು ಬಡಾವಣೆಗಳಲ್ಲಿ ಸಣ್ಣಪುಟ್ಟ ಗಲಾಟೆಗಳು ನಡೆಯುತ್ತಲೇ ಇದ್ದು, ಪುಡಿ ರೌಡಿಗಳ ಕಾಟವೂ ಮಿತಿ ಮೀರುತ್ತಿದೆ. ಇದರಿಂದಾಗಿ ಹಿರಿಯ ನಾಗರಿಕರು ಹಾಗೂ ಮಹಿಳೆಯರಿಗೆ ಕಿರಿಕಿರಿ ಉಂಟಾಗುತ್ತಿದೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಸೀಮಾ ಲಾಟ್ಕರ್ ಅವರು ದಕ್ಷ ಅಧಿಕಾರಿಗಳು ಹಾಗೂ ಅಪರಾಧ ವಿಭಾಗದ ಸಿಬ್ಬಂದಿಯನ್ನು ಒಳಗೊಂಡ ರೌಡಿ ಪ್ರತಿಬಂಧಕ ದಳವನ್ನು ರಚಿಸಿದ್ದಾರೆ.

ಕಸ್ತೂರಿ ರಂಗನ್ ಆರಂಭಿಸಿದ್ದರು: ಈ ಹಿಂದೆ ರೌಡಿಗಳ ಅಟ್ಟಹಾಸ ಮಿತಿಮೀರಿದ್ದ ವೇಳೆ ಅಂದು ಮೈಸೂರು ನಗರ ಪೊಲೀಸ್ ಆಯುಕ್ತರಾಗಿದ್ದ ಕಸ್ತೂರಿ ರಂಗನ್ ಅವರು ಮೊದಲ ಬಾರಿಗೆ ರೌಡಿ ಪ್ರತಿಬಂಧಕ ದಳವನ್ನು ಆರಂಭಿಸಿದ್ದರು. ಕೆ.ಎಸ್.ತಮ್ಮಯ್ಯ, ಧರ್ಮೇಶ್, ಪುಟ್ಟಸ್ವಾಮಿಗೌಡ ಮುಂತಾದ ಖಡಕ್ ಅಧಿಕಾರಿಗಳು ದಳದಲ್ಲಿ ಇದ್ದರು.

ಅಂದು ಆಯುಕ್ತರ ಆದೇಶದ ಮೇರೆಗೆ ಕಾರ್ಯಾಚರಣೆ ಆರಂಭಿಸಿದ್ದ ಪೊಲೀಸರ ತಂಡ ರೌಡಿಗಳ ಹಾವಳಿಯನ್ನು ಮಟ್ಟ ಹಾಕಿತ್ತು. ಸಿಸಿಬಿ ವಿಭಾಗ ಆರಂಭವಾದ ನಂತರ ರೌಡಿ ಪ್ರತಿಬಂಧಕ ದಳ ನೇಪಥ್ಯಕ್ಕೆ ಸರಿದಿತ್ತು. ಇದೀಗ ಸೀಮಾ ಲಾಟ್ಕರ್ ಅವರ ಆಸಕ್ತಿಯಿಂದಾಗಿ ನಗರದಲ್ಲಿ ಮತ್ತೆ ರೌಡಿ ಪ್ರತಿಬಂಧಕ ದಳ ಕಾರ್ಯಾರಂಭಗೊಂಡಿದೆ. ಈ ದಳದ ಕಾರ್ಯಾಚರಣೆ ಯಾವುದೇ ಒಂದು ಪೊಲೀಸ್ ಠಾಣೆಗೆ ಸೀಮಿತವಾಗಿರುವುದಿಲ್ಲ. ನಗರದ ಯಾವುದೇ ಠಾಣಾ ವ್ಯಾಪ್ತಿಯಲ್ಲಿ ಬರುವ ರೌಡಿಶೀಟರ್ ಗಳು, ಪುಡಿ ರೌಡಿಗಳು ಹಾಗೂ ಸಾರ್ವಜನಿಕರ ನೆಮ್ಮದಿಗೆ ಭಂಗ ತರುವವರನ್ನು ಗುರುತಿಸಿ ಅಂತಹವರಿಗೆ ಪೊಲೀಸರು ತಮ್ಮದೇ ಆದ ರೀತಿಯಲ್ಲಿ ‘ಪಾಠ’ ಕಲಿಸಲಿದ್ದಾರೆ.

ಪರಿಶೀಲನೆ ಆರಂಭ: ಇದೀಗ ಆಯಾ ವಿಭಾಗದ ಎಸಿಪಿ ನೇತೃತ್ವದಲ್ಲಿ ಕಳೆದ ಎರಡು ದಿನಗಳಿಂದ ಪ್ರತಿದಿನ ಸಂಜೆಯಿಂದ ತಡರಾತ್ರಿವರೆಗೆ ಪೊಲೀಸರ ತಂಡ ಕಾರ್ಯಾಚರಣೆ ನಡೆಸುತ್ತಿದೆ. ತಮ್ಮ ವ್ಯಾಪ್ತಿಯಲ್ಲಿ ಇರುವ ಬಾರ್‌ಗಳು, ರೆಸ್ಟೋರೆಂಟ್‌ಗಳು, ರಾತ್ರಿ ಹೋಟೆಲ್‌ಗಳು, ಉದ್ಯಾನ, ಟೀ ಶಾಪ್ ಹಾಗೂ ಇನ್ನಿತರ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರ ತಂಡ ಪರಿಶೀಲನೆ ನಡೆಸುತ್ತಿದೆ. ಈ ಸಂಬಂಧ ಎರಡು ದಿನಗಳ ಅವಧಿಯಲ್ಲಿ ೨೦೪ ಕೋಟ್ಪಾ ಪ್ರಕರಣಗಳು, ೪೮೭ ಮಂದಿ ವಿರುದ್ಧ ಕೆಪಿ ಆಕ್ಟ್ ಹಾಗೂ ಪೆಟ್ಟಿ ಕೇಸ್ ದಾಖಲು ಮಾಡಲಾಗಿದೆ. ಸಾರ್ವಜನಿಕರಿಗೆ ತೊಂದರೆ ಕೊಡುವವರನ್ನು ಕಾನೂನು ರೀತಿಯಲ್ಲಿ ಮಟ್ಟಹಾಕುವ ಉದ್ದೇಶದಿಂದ ಮತ್ತೆ ರೌಡಿ ಪ್ರತಿಬಂಧಕ ದಳವನ್ನು ಆರಂಭಿಸಲಾಗುತ್ತಿದೆ.

ಇದರ ಜೊತೆಗೆ ಎಸಿಪಿ ನೇತೃತ್ವದಲ್ಲಿ ಪ್ರತಿದಿನ ಸೂಕ್ಷ್ಮ ಪ್ರದೇಶಗಳಲ್ಲಿ ಸ್ಥಳ ಪರಿಶೀಲನೆ ನಡೆಸಲಾಗುತ್ತಿದೆ. ಈ ಕಾರ್ಯಾಚರಣೆಯನ್ನು ನಿರಂತರವಾಗಿ ನಡೆಸಲಾಗುವುದು. ಇದಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ಸೀಮಾ ಲಾಟ್ಕರ್ ಹೇಳಿದ್ದಾರೆ.

” ಸಾರ್ವಜನಿಕರು ತಮ್ಮ ಸುತ್ತಮುತ್ತ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿದ್ದರೆ ಅಥವಾ ಅನುಮಾನಾಸ್ಪದ ಬೆಳವಣಿಗೆಗಳು ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಮಾಹಿತಿ ನೀಡಿದವರ ಗುರುತನ್ನು ಗೌಪ್ಯವಾಗಿಡಲಾಗುವುದು. ಮೈಸೂರಿನಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಕೈ ಜೋಡಿಸಬೇಕು.”

-ಸೀಮಾ ಲಾಟ್ಕರ್, ನಗರ ಪೊಲೀಸ್ ಆಯುಕ್ತರು

ಆಂದೋಲನ ಡೆಸ್ಕ್

Recent Posts

ಮನರೇಗಾ ಹೆಸರು ಬದಲಾವಣೆಗೆ ವಿರೋಧ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್‌ ನಾಯಕರು…

50 mins ago

ಚಾಮರಾಜನಗರ| ನಂಜೇದೇವನಪುರದಲ್ಲಿ ಮತ್ತೊಂದು ಹುಲಿ ಮರಿ ಸೆರೆ: ಇನ್ನೊಂದು ಮಾತ್ರ ಬಾಕಿ

ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…

1 hour ago

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

2 hours ago

ಜನವರಿ 28 ಮತ್ತು 29ರಂದು ‘ತಟ್ಟೆ ಇಡ್ಲಿ ರಾದ್ಧಾಂತ’ ಹಾಸ್ಯ ನಾಟಕ ಪ್ರದರ್ಶನ

ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…

2 hours ago

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

3 hours ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

4 hours ago