ಬಟಿಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮ
ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಗ್ರಾಮೀಣ ಕಲೆಗಳ ಪ್ರದರ್ಶನ ನಮ್ಮ ಜಾನಪದ ಕಲೆಯನ್ನು ಅನಾವರಣಗೊಳಿಸಿತು.
ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಗ್ರಾಮದ ಶ್ರೀ ದೊಡ್ಡಮ್ಮ, ಕರಿಯಮ್ಮ ಸಿಡಿ ಮತ್ತು ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ದೇವರ ಓಕುಳಿ ಹಬ್ಬ ನಡೆದ ಮಾರನೇ ದಿನ ಮಂಗಳವಾರ ವಿವಿಧ ಜನಪದ ಗ್ರಾಮೀಣ ಕಲೆಗಳನ್ನು ವಿಭಿನ್ನವಾಗಿ ಪ್ರದರ್ಶಿಸಲಾಯಿತು.
ಗ್ರಾಮೀಣ ಕಲೆಗಳಾದ ಹುಲಿ ವೇಷ, ಪಾಳೆಗಾರಿಕೆ, ಕೀಲು ಕುದುರೆ, ಮಹಿಷಿ, ಮರಿ ಹುಲಿಗಳು, ಯಮಕಿಂಕರರ ವೇಷ ಸೇರಿದಂತೆ ಅನೇಕ ವಿಭಿನ್ನ ರೀತಿಯ ಜನಪದ ಕಲೆಗಳ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ನಾಡಿನ ಗ್ರಾಮೀಣ ಸಂಸ್ಕೃತಿಯನ್ನು ಬಿಂಬಿಸುವ ಕಲಾ ಪ್ರಕಾರಗಳು ಗ್ರಾಮೀಣ ಪ್ರದೇಶಗಳಲ್ಲಿ ಪ್ರದರ್ಶನಗೊಳ್ಳುತ್ತಿದ್ದು, ಜನರಿಗೆ ಉತ್ತಮ ಸಂದೇಶ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ನಾನು ನನ್ನ ಹತ್ತನೇ ವಯಸ್ಸಿನಿಂದ ಗ್ರಾಮದ ಹಬ್ಬಗಳಲ್ಲಿ ಹುಲಿ ವೇಷ ಹಾಕುತ್ತಿದ್ದೇನೆ. ನಾನು ವೇಷ ಹಾಕಿ ಕುಣಿಯುವಾಗ ಜನರು ಪ್ರತಿ ಬಾರಿ ನನಗೆ ಬೆಂಬಲ ನೀಡಿ ಸೂರ್ತಿ ತುಂಬುತ್ತಾರೆ. ನನಗೆ ೫೮ ವರ್ಷ ತುಂಬಿದೆ. ಆದರೂ ಇನ್ನೂ ಕುಣಿತ ಹಾಕಬೇಕು ಎನ್ನುವ ಆಸೆ ಹೊಂದಿದ್ದೇನೆ ಎಂದು ಹುಲಿ ವೇಷ ಪಾತ್ರಧಾರಿ ಸತ್ಯನಾರಾಯಣ ಹೇಳಿದರು.
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…